ಸೋಮವಾರ, ಆಗಸ್ಟ್ 2, 2021
20 °C

ಮಿಜೋರಾಂ: ಮತ್ತೆ ಭೂಕಂಪ

ಪಿಟಿಐ Updated:

ಅಕ್ಷರ ಗಾತ್ರ : | |

ಐಜ್ವಾಲಾ: ಮಿಜೋರಾಂನ ಚಂಪೈ ಜಿಲ್ಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.2ರಷ್ಟು ತೀವ್ರತೆ ದಾಖಲಾಗಿದೆ. ಇದು ಮಿಜೋರಾಂನಲ್ಲಿ ತಿಂಗಳ ಅವಧಿಯಲ್ಲಿ ಸಂಭವಿಸಿರುವ ಒಂಬತ್ತನೇ ಭೂಕಂಪವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭೂಕಂಪದ ಸಂದರ್ಭದಲ್ಲಿ ಯಾವುದೇ ಪ್ರಾಣಹಾನಿಯಾಗಲೀ, ಆಸ್ತಿ ನಷ್ಟವಾಗಲೀ ಸಂಭವಿಸಿದ ವರದಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚಂಪೈನಿಂದ 33 ಕಿ.ಮೀ ದೂರದಲ್ಲಿ ಮಧ್ಯಾಹ್ನ 3.56ಕ್ಕೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪನ ಮಾಪನ ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.