ಮಂಗಳವಾರ, ಆಗಸ್ಟ್ 3, 2021
21 °C

ವಸೂಲಾಗದ ಸಾಲ: ಕೇಂದ್ರವನ್ನು ಎಚ್ಚರಿಸಿದ ರಾಹುಲ್‌ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

rahul gandhi

ನವದೆಹಲಿ: ‘ದೇಶದಲ್ಲಿ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ದಿಮೆಗಳು ನಾಶ ಹೊಂದಿದ್ದು, ದೊಡ್ಡ ದೊಡ್ಡ ಕಂಪನಿಗಳು ತೀವ್ರ ಒತ್ತಡದಲ್ಲಿವೆ. ಇದಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ಕಾರಣ ಎಂದು ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಬುಧವಾರ ಅವರು ಈ ಬಗ್ಗೆ ಟ್ವೀಟ್‌ ಮಾಡಿದ್ದು, ಮುಂದಿನ ಹಣಕಾಸು ವರ್ಷದಲ್ಲಿ ಅಗ್ರ 500 ಖಾಸಗಿ ಕಂಪನಿಗಳ ವಸೂಲಾಗದ ಸಾಲ ಮೊತ್ತ ₹1.67 ಲಕ್ಷದಷ್ಟು ಇರಲಿದೆ ಎಂದು ಅಂದಾಜಿಸಲಾಗಿದೆ ಎನ್ನುವ ಮಾಧ್ಯಮ ವರದಿವೊಂದನ್ನು ಉಲ್ಲೇಖಿಸಿದ್ದಾರೆ.

‘ಕೋವಿಡ್‌–19 ಹಿನ್ನೆಲೆಯಲ್ಲಿ ಕೆಲವು ತಿಂಗಳಿನಿಂದ ‘ಆರ್ಥಿಕ ಸುನಾಮಿ’ ಬರಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಾ ಬಂದಿದ್ದೆ. ವಸೂಲಾಗದ ಸಾಲದ (ಎನ್‌ಪಿಎ) ಕುರಿತೂ ಎಚ್ಚರಿಸಿದ್ದೆ. ಆಗ ಬಿಜೆಪಿ ಹಾಗೂ ಮಾಧ್ಯಮ ನನ್ನನ್ನು ಅಪಹಾಸ್ಯ ಮಾಡಿತು’ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು