ಬುಧವಾರ, ಅಕ್ಟೋಬರ್ 28, 2020
20 °C

ಜಿವಿಕೆ, ಮಿಯಾಲ್‌ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪ: 9 ಕಡೆ ಇ.ಡಿ ಶೋಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ವಹಣೆಯಲ್ಲಿ ಜಿವಿಕೆ ಸಮೂಹ ಸಂಸ್ಥೆಗಳ ವಿರುದ್ಧ ಕೇಳಿಬಂದಿರುವ ಹಣ ಅಕ್ರಮ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮುಂಬೈ ಮತ್ತು ಹೈದರಾಬಾದ್‌ನ ಒಂಬತ್ತು ಸ್ಥಳಗಳಲ್ಲಿ ಮಂಗಳವಾರ ಶೋಧ ನಡೆಸಿದರು.

ಜಿವಿಕೆ ಸಮೂಹ ಸಂಸ್ಥೆಗಳು ಮತ್ತು ಮುಂಬೈ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳ ಕಚೇರಿಗಳಲ್ಲಿ ಶೋಧ ನಡೆಸಿದರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಹಿಂದೆ, ಮುಂಬೈ ಇಂಟರ್‌ನ್ಯಾಷನಲ್‌ ಏರ್‌ಪೋರ್ಟ್‌ ಲಿ. (ಎಂಎಐಎಲ್‌) ಸಂಸ್ಥೆಯಲ್ಲಿ ನಡೆದಿದೆ ಎನ್ನಲಾದ ₹ 705 ಕೋಟಿ ಮೊತ್ತದ ಅಕ್ರಮಕ್ಕೆ ಸಂಬಂಧಿಸಿದಂತೆ, ಜಾರಿ ನಿರ್ದೇಶನಾಲಯವು ಜಿವಿಕೆ ಗ್ರೂಪ್‌, ಎಂಎಐಎಲ್‌ ಹಾಗೂ ಇತರರ ವಿರುದ್ಧ ಹಣ ಅಕ್ರಮ ವರ್ಗಾವಣೆ ಆರೋಪದಡಿ ದೂರು ದಾಖಲಿಸಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ಈ ಸಂಸ್ಥೆಗಳ ವಿರುದ್ಧ ಸಿಬಿಐ ಕೂಡ ಈಚೆಗೆ ಎಫ್‌ಐಆರ್‌ ದಾಖಲಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು