ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು ರಾಜಭವನ: 84 ಸಿಬ್ಬಂದಿಯಲ್ಲಿ ಕೋವಿಡ್‌

Last Updated 23 ಜುಲೈ 2020, 11:11 IST
ಅಕ್ಷರ ಗಾತ್ರ

ಚೆನ್ನೈ: ಭದ್ರತಾ ಸಿಬ್ಬಂದಿ ಸೇರಿದಂತೆ ತಮಿಳುನಾಡು ರಾಜಭವನದ ಒಟ್ಟು 84 ಸಿಬ್ಬಂದಿಯಲ್ಲಿ ಕೋವಿಡ್‌ ದೃಢಪಟ್ಟಿದೆ.

‘ಸೋಂಕಿತರಲ್ಲಿ ಯಾರೂ ರಾಜ್ಯಪಾಲ ಬನ್ವರಿಲಾಲ್‌ ಪುರೋಹಿತ್‌ ಮತ್ತು ಹಿರಿಯ ಅಧಿಕಾರಿಗಳ ಸಂಪರ್ಕಕ್ಕೆ ಬಂದಿಲ್ಲ’ ಎಂದು ಸರ್ಕಾರ ಗುರುವಾರ ತಿಳಿಸಿದೆ.

‘ರಾಜಭವನದ ಕೆಲ ಸಿಬ್ಬಂದಿಗೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಲ್ಲಿನ 147 ಸಿಬ್ಬಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ 84 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಸದ್ಯ ಇವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜಭವನದಲ್ಲಿ ಸೋಂಕು ನಿವಾರಕ ಸಿಂಪಡಣೆ ಮಾಡಲಾಗಿದೆ’ ಎಂದು ತಮಿಳುನಾಡಿನ ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT