ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಆಯೋಗ: 80 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಅಂಚೆ ಮತಪತ್ರ ಅವಕಾಶ ಇಲ್ಲ

Last Updated 16 ಜುಲೈ 2020, 15:04 IST
ಅಕ್ಷರ ಗಾತ್ರ

ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆ ಮತ್ತು ಉಪಚುನಾವಣೆಗಳಲ್ಲಿ ಅಂಚೆ ಮತಪತ್ರ ಆಯ್ಕೆಯ ವಯೋಮಿತಿ ಸಡಿಲಿಕೆ ಮಾಡದಿರಲು ಚುನಾವಣಾ ಆಯೋಗ ಗುರುವಾರ ನಿರ್ಧರಿಸಿದೆ.

ಕೋವಿಡ್‌ ಹಿನ್ನೆಲೆಯಲ್ಲಿ ಹಿರಿಯ ನಾಗರಿಕರ ಸುರಕ್ಷತೆಗಾಗಿ 65 ವರ್ಷ ಅಥವಾ ಅದಕ್ಕೂ ಹೆಚ್ಚಿನ ವಯಸ್ಸಿನವರಿಗೆ ಅಂಚೆ ಮತಪತ್ರ ಆಯ್ಕೆಗೆ ಅವಕಾಶ ಕಲ್ಪಿಸಿ ಕಾನೂನು ಸಚಿವಾಲಯ ಚುನಾವಣಾ ನಿಯಮಗಳಿಗೆ ತಿದ್ದುಪಡಿ ತಂದಿತ್ತು.

ಆದರೆ, ಚುನಾವಣಾ ಆಯೋಗದ ಪ್ರಕಟಣೆಯ ಪ್ರಕಾರ, 80 ವರ್ಷ ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಹಿರಿಯರು, ಅಂಗವಿಕಲರು, ಅತ್ಯಗತ್ಯ ಸೇವೆಗಳಲ್ಲಿ ನಿರತರಾಗಿರುವವರು ಹಾಗೂ ಕೋವಿಡ್‌–19 ದೃಢಪಟ್ಟವರು ಅಥವಾ ಕ್ವಾರಂಟೈನ್‌ನಲ್ಲಿರುವ ಮತದಾರರಿಗೆ ಅಂಚೆ ಮತಪತ್ರದ ಮೂಲಕ ಮತದಾನ ನಡೆಸುವ ಅವಕಾಶವನ್ನು ವಿಸ್ತರಿಸಲಾಗಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಕಾನೂನು ಸಚಿವಾಲಯ ಚುನಾವಣಾ ನಿಯಮಾವಳಿಗಳಿಗೆ ತಿದ್ದುಪಡಿ ತರುವ ಮೂಲಕ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಲ್ಲಿ ಅಂಗವಿಕಲರು, 80 ವರ್ಷ ಮತ್ತು ಹೆಚ್ಚು ವಯಸ್ಸಿನವರು ಅಂಚೆ ಮತಪತ್ರ ಆಯ್ಕೆ ಮಾಡುವ ಅವಕಾಶ ಕಲ್ಪಿಸಲಾಯಿತು. 2020ರ ಜೂನ್‌ 19ರಂದು ಮತ್ತೊಂದು ತಿದ್ದುಪಡಿಯ ಮೂಲಕ 65 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳಿಗೆ ಅಂಚೆ ಮತದಾನದ ಅವಕಾಶ ನೀಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT