ಬುಧವಾರ, ಆಗಸ್ಟ್ 12, 2020
27 °C

ಮಲಯಾಳಂ ನಟಿಗೆ ಬ್ಲಾಕ್ ಮೇಲ್ ಮಾಡಿದ್ದ ಮೂವರಿಗೆ ಜಾಮೀನು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಕೇರಳ: ಮಲಯಾಳಂ ಚಿತ್ರರಂಗದ ಖ್ಯಾತ ನಟಿಯೊಬ್ಬರಿಗೆ ಬ್ಲಾಕ್ ಮೇಲ್ ಮಾಡಿದ ಆರೋಪದಲ್ಲಿ ಬಂಧಿತರಾಗಿದ್ದ ಮೂವರಿಗೆ ಎರ್ನಾಕುಲಂ ಸೆಷನ್ಸ್ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.

ಶರತ್, ಅಬುಬಕರ್, ಹ್ಯಾರಿಸ್ ಎಂಬುವರು ನಟಿ ಶಾಮ್ನಾ ಕಾಸಿಂ (ಪೂರ್ಣ) ಅವರಿಗೆ ಬ್ಲಾಕ್ ಮೇಲ್ ಮಾಡಿದ್ದರು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ನಟಿ ಸ್ಥಳೀಯ ಪೊಲೀಸರಿಗೆ ದೂರು ನೀಡಿದ್ದರು. ನಂತರ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ನೀಡಿದೆ. ಅಲ್ಲದೆ, ತನಿಖಾಧಿಕಾರಿಗೆ ಸಹಕರಿಸಬೇಕು. ವಾರದಲ್ಲಿ ಎರಡು ದಿನ ತನಿಖಾಧಿಕಾರಿಯ ಮುಂದೆ ಹಾಜರಾಗಬೇಕು ಎಂದು ನ್ಯಾಯಾಲಯ ಷರತ್ತು ವಿಧಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು