ಭಾನುವಾರ, ಆಗಸ್ಟ್ 1, 2021
27 °C

ಉತ್ತರಪ್ರದೇಶ: ಮಾಜಿ ಶಾಸಕನ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಲಹಾಬಾದ್‌: ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ‌ ಸಮಾಜವಾದಿ ಪಕ್ಷದ ಮಾಜಿ ಶಾಸಕ ಖಾಲೀದ್‌ ಅಜೀಂ ಅಲಿಯಾಸ್‌ ಅಶ್ರಫ್‌ನನ್ನು ಕೌಶಂಬಿಯಲ್ಲಿ ಶುಕ್ರವಾರ ಬಂಧಿಸಲಾಗಿದೆ. 

ವಿವಿಧ ಪೊಲೀಸ್‌ ಸ್ಟೇಷನ್‌ಗಳಲ್ಲಿ ಅವರ ವಿರುದ್ಧ ಹಲವು ಅಪರಾಧ ಚಟುವಟಿಕೆಗಳ ಕಾರಣಕ್ಕೆ ಪ್ರಕರಣ ದಾಖಲಾಗಿತ್ತು. ಅಡಗುತಾಣದಲ್ಲಿದ್ದ ಅಶ್ರಫ್‌ನನ್ನು ಮುಂಜಾನೆ ಬಂಧಿಸಲಾಯಿತು ಎಂದು ಎಸ್‌ಪಿ ದಿನೇಶ್‌ ಕುಮಾರ್‌ ಸಿಂಗ್‌ ತಿಳಿಸಿದ್ದಾರೆ. 

ಅಶ್ರಫ್‌ನ ಸುಳಿವು ಕೊಟ್ಟವರಿಗೆ ₹ 1 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಹಲವು ಸಂಬಂಧಿಕರನ್ನು ಕರೆದು ವಿಚಾರಣೆ ನಡೆಸಲಾಯಿತು.  ಅಶ್ರಫ್‌ ಮಾಜಿ ಸಂಸದ ಅತಿಕ್‌ ಅಹಮದ್‌ ಅವರ ಸಹೋದರ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು