ಮಂಗಳವಾರ, ಆಗಸ್ಟ್ 3, 2021
23 °C

ಉತ್ತರ ಪ್ರದೇಶ | ಗಾಜಿಯಾಬಾದ್‌ ಕಾರ್ಖಾನೆಯಲ್ಲಿ ಸ್ಫೋಟ, 7 ಸಾವು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Ghaziabad factory blast

ಲಖನೌ: ಗಾಜಿಯಾಬಾದ್‌ನ ಮೋದಿ ನಗರದ ಕಾರ್ಖಾನೆಯೊಂದರಲ್ಲಿ ಭಾನುವಾರ ಸಂಜೆ ಸ್ಫೋಟ ಸಂಭವಿಸಿ 7 ಮಂದಿ ಮೃತಪಟ್ಟಿದ್ದಾರೆ. 4 ಜನ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಜಯ್ ಶಂಕರ್ ಪಾಂಡೆ ತಿಳಿಸಿದ್ದಾರೆ.

ಸ್ಫೋಟ ಸಂಭವಿಸಿರುವುದು ಕ್ಯಾಂಡಲ್‌ ತಯಾರಿಕಾ ಕಾರ್ಖಾನೆಯಲ್ಲಿ ಎನ್ನಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಸಂಜೆ 3 ಗಂಟೆ ವೇಳೆಗೆ ಸ್ಪೋಟ ಸಂಭವಿಸಿದೆ. ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾಹಿತಿ ಪಡೆದುಕೊಂಡಿದ್ದು, ತನಿಖೆ ನಡೆಸುವಂತೆ ಜಿಲ್ಲಾ ಮ್ಯಾಜಿಸ್ಟ್ರೇಟ್‌ ಅಜಯ್ ಶಂಕರ್ ಪಾಂಡೆ ಅವರಿಗೆ ಸೂಚಿಸಿದ್ದಾರೆ. ದುರಂತದ ಬಗ್ಗೆ ಯೋಗಿ ಸಂತಾಪ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ಟ್ವೀಟ್ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು