ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂ | ಒಐಎಲ್‌ ನೈಸರ್ಗಿಕ ಅನಿಲ ಬಾವಿಯಲ್ಲಿ ಸ್ಫೋಟ: ನಾಲ್ವರಿಗೆ ಗಾಯ

Last Updated 22 ಜುಲೈ 2020, 12:21 IST
ಅಕ್ಷರ ಗಾತ್ರ

ಗುವಾಹಟಿ:ಅಸ್ಸಾಂನ ಪೂರ್ವ ಭಾಗದಲ್ಲಿರುವ ಆಯಿಲ್‌ ಇಂಡಿಯಾ ಲಿಮಿಟೆಡ್‌ನ (ಒಐಎಲ್‌) ನೈಸರ್ಗಿಕ ಅನಿಲ ಬಾವಿಯಲ್ಲಿ ಬುಧವಾರ ಮತ್ತೊಮ್ಮೆ ಸ್ಫೋಟ ಸಂಭವಿಸಿದ್ದು,ನಾಲ್ವರು ತಜ್ಞರಿಗೆ ಗಾಯಗಳಾಗಿವೆ.

ಬಾಗ್ಜನ್‌ ತೈಲ ಕ್ಷೇತ್ರದ ಅನಿಲ ಬಾವಿಯಲ್ಲಿ ಜೂನ್‌ 9 ರಿಂದ ನಿರಂತರವಾಗಿ ಬೆಂಕಿ ಕಾಣಿಸಿಕೊಳ್ಳುತ್ತಿದೆ. ಸೋರಿಕೆಯನ್ನು ನಿಯಂತ್ರಿಸಲು ಸಿಂಗಪುರದ ತಜ್ಞರ ತಂಡವು ಪ್ರಯತ್ನದಲ್ಲಿ ತೊಡಗಿದ್ದಾಗಲೇ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೈಲಿ ದೂರದವರೆಗೆ ಬೆಂಕಿ ದಟ್ಟವಾಗಿ ಕಪ್ಪು ಹೊಗೆ ಆವರಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಅನಿಲ ಬಾವಿಯಲ್ಲಿ ಮೇ 27ರಿಂದ ಅನಿಲ ಸೋರಿಕೆಯಾಗಿ, ಜೂನ್‌ 9ರಂದು ಬೆಂಕಿ ಹೊತ್ತಿಕೊಂಡಿತ್ತು.ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದರು.ದುರಂತ ನಡೆದ ಸಮೀಪದ ಗ್ರಾಮಗಳಲ್ಲಿ ವಾಸಿಸುತ್ತಿದ್ದ 10,000 ಸಾವಿರ ಜನರನ್ನು ಸ್ಥಳಾಂತರಿಸಲಾಗಿದ್ದು, ಅವರನ್ನು ಈಗಲೂ ಪರಿಹಾರ ಶಿಬಿರಗಳಲ್ಲಿ ಇರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT