ಸೋಮವಾರ, ಆಗಸ್ಟ್ 2, 2021
28 °C
ವಿ.ವಿ ಗಳಿಗೆ ಯುಜಿಸಿ ಸೂಚನೆ

ಸೆಪ್ಟೆಂಬರ್‌ ಅಂತ್ಯಕ್ಕೆ ಅಂತಿಮ ಸೆಮಿಸ್ಟರ್‌ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪದವಿ ಕೋರ್ಸ್‌ಗಳ ಅಂತಿಮ ಸೆಮಿಸ್ಟರ್‌ ಪರೀಕ್ಷೆಗಳನ್ನು ಸೆಪ್ಟೆಂಬರ್‌ ಅಂತ್ಯದೊಳಗಾಗಿ ನಡೆಸುವಂತೆ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಎಲ್ಲ ವಿಶ್ವವಿದ್ಯಾಲಯ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಿದೆ.

ಪರೀಕ್ಷೆಗಳನ್ನು ಆನ್‌ಲೈನ್‌ ಅಥವಾ ಆಫ್‌ಲೈನ್‌ ಇಲ್ಲವೇ ಎರಡೂ ವ್ಯವಸ್ಥೆಗಳನ್ನು ಬಳಸಿ ನಡೆಸಬಹುದು. ಇದು 2019–20ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿ ನೀಡಿರುವ ಅವಕಾಶ ಎಂದೂ ಯುಜಿಸಿ ತಿಳಿಸಿದೆ. 

ಕೋವಿಡ್‌ ಪಿಡುಗಿನ ಹಿನ್ನೆಲೆಯಲ್ಲಿ ವಿವಿಧ ಪರೀಕ್ಷೆಗಳನ್ನು ಯುಜಿಸಿ ಮಾರ್ಚ್‌ನಿಂದಲೇ ರದ್ದುಪಡಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು