ಬುಧವಾರ, ಆಗಸ್ಟ್ 5, 2020
26 °C

ಅಹಮದಾಬಾದ್: ಮಾಸ್ಕ್‌ ಧರಿಸದವರಿಗೆ ₹ 500 ದಂಡ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಅಹಮದಾಬಾದ್‌ನಲ್ಲಿ ನಿರ್ಬಂಧಗಳನ್ನು ಕಠಿಣಗೊಳಿಸಲಾಗಿದ್ದು, ಮುಖಗವಸು ಧರಿಸದೆಯೇ ಸಾರ್ವಜನಿಕ ಪ್ರದೇಶಗಳಲ್ಲಿ ಅಡ್ಡಾಡುವವರಿಗೆ ವಿಧಿಸುವ ದಂಡದ ಮೊತ್ತವನ್ನು ₹ 500ಕ್ಕೆ ಏರಿಸಲಾಗಿದೆ. 

ಮಾಸ್ಕ್ ಧರಿಸದವರಿಗೆ ಈ ಹಿಂದೆ ₹ 200 ದಂಡ ವಿಧಿಸಲಾಗುತ್ತಿತ್ತು. ನಗರದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೆ ನಿಯಮ ಉಲ್ಲಂಘಿಸುವವರ ಸಂಖ್ಯೆ ಅಧಿಕವಾಗಿರುವುದರಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಗುಪ್ತಾ ತಿಳಿಸಿದ್ಧಾರೆ. ಅವರನ್ನು ನಗರದ ಕೋವಿಡ್‌–19 ಸ್ಥಿತಿಗತಿ ಪರಿಶೀಲನೆಯ ಮೇಲ್ವಿಚಾರಕರಾಗಿ ನೇಮಿಸಲಾಗಿದೆ.

ಈವರೆಗೆ ನಗರದಲ್ಲಿ ಮಾಸ್ಕ್‌ ಧರಿಸಿದ 1.72 ಲಕ್ಷ ಜನರಿಗೆ ದಂಡ ವಿಧಿಸಲಾಗಿದೆ. ಅಂತರ ಕಾಯ್ದುಕೊಳ್ಳದಿರುವ ಮತ್ತು ಇತರ ನಿಯಮಗಳನ್ನು ಪಾಲಿಸದ 94 ಮಳಿಗೆಗಳನ್ನು ಜಪ್ತಿ ಮಾಡಲಾಗಿದೆ ಎಂದು ಗುಪ್ತಾ ಮಾಹಿತಿ ನೀಡಿದರು. 

ಪಾನ್‌ ಅಂಗಡಿಗಳ ಬಳಿಯೇ ಗ್ರಾಹಕರು ಉಗುಳಿದರೆ ಅಂಗಡಿಯ ಮಾಲೀಕರಿಗೆ ₹ 10 ಸಾವಿರ ದಂಡ ವಿಧಿಸಲಾಗುವುದು. ಅಹಮದಾಬಾದ್ ಮುನ್ಸಿಪಲ್ ಕಮಿಷನರ್ ಮುಖೇಶ್ ಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು