ಶುಕ್ರವಾರ, ಜುಲೈ 23, 2021
22 °C

ಚಿನ್ನ ಸ್ಮಗ್ಲಿಂಗ್: ತನಿಖಾ ಸಂಸ್ಥೆ ಆಯ್ಕೆಗೆ ಕೇಂದ್ರ ಸ್ವತಂತ್ರ, ಪಿಣರಾಯಿ ವಿಜಯನ್

ಪಿಟಿಐ Updated:

ಅಕ್ಷರ ಗಾತ್ರ : | |

Pinarayi Vijayan

ತಿರುವನಂತಪುರ: ಚಿನ್ನದ ಕಳ್ಳ ಸಾಗಾಣಿಕೆ ನಡೆಸುತ್ತಿದ್ದ ಜಾಲದ ಜತೆಗೆ ಮುಖ್ಯಮಂತ್ರಿ ಕಚೇರಿ ನೇರ ಸಂಪರ್ಕ ಹೊಂದಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಯಾವ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂಬುದು ಕೇಂದ್ರಕ್ಕೆ ಬಿಟ್ಟ ವಿಚಾರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಚಿನ್ನದ ಕಳ್ಳ ಸಾಗಾಣಿಕೆ ಜಾಲದ ಜತೆಗೆ ನಂಟು ಹೊಂದಿದ್ದಾರೆಂಬ ವಿಚಾರ ಕೇರಳ ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿದೆ. ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್ ವಾಗ್ದಾಳಿ ನಡೆಸಿವೆ.

ಚಿನ್ನದ ಕಳ್ಳ ಸಾಗಾಣಿಕೆಯಲ್ಲಿ ಅರಬ್‌ ಸಂಯುಕ್ತ ರಾಷ್ಟ್ರಗಳ ದೂತಾವಾಸದ ಮಾಜಿ ಸಿಬ್ಬಂದಿ ಜತೆ ಶಾಮೀಲಾಗಿದ್ದಾರೆ ಎಂಬ ಆರೋಪ ಹೊತ್ತಿರುವ ಕಾರಣಕ್ಕೆ ಪಿಣರಾಯಿ ಅವರ ಪ್ರಧಾನ ಕಾರ್ಯದರ್ಶಿ ಎಂ. ಶಿವಶಂಕರ್‌ ಅವರನ್ನು ಮಂಗಳವಾರ ಹುದ್ದೆಯಿಂದ ತೆರವುಗೊಳಿಸಲಾಗಿತ್ತು.

‘ಕಳ್ಳಸಾಗಾಣಿಕೆ ನಡೆಸುತ್ತಿದ್ದ ಜಾಲದ ಜತೆಗೆ ಮುಖ್ಯಮಂತ್ರಿ ಕಚೇರಿ ನೇರ ಸಂಪರ್ಕ ಹೊಂದಿದೆ. ಆರೋಪಿ ಸ್ವಪ್ನಾ 2017ರಿಂದಲೇ ಮುಖ್ಯಮಂತ್ರಿಗೆ ಪರಿಚಿತರು’ ಎಂದು ಬಿಜೆಪಿ ಆರೋಪಿಸಿತ್ತು. ಅದರ ಬೆನ್ನಲ್ಲೇ, ‘ಈ ಕುರಿತು ಸಿಬಿಐ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್‌ ಒತ್ತಾಯಿಸಿತ್ತು.

ಚಿನ್ನ ಕಳ್ಳಸಾಗಾಣಿಕೆ ಆರೋಪ: ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರ್ಯದರ್ಶಿ ತಲೆದಂಡ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು