ಭಾನುವಾರ, ಸೆಪ್ಟೆಂಬರ್ 20, 2020
22 °C

ಕೇರಳ ಚಿನ್ನ ಕಳ್ಳ ಸಾಗಣೆ ಪ್ರಕರಣ| ಅಮಾನತುಗೊಂಡಿರುವ ಅಧಿಕಾರಿ ಶಿವಶಂಕರ್‌ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಚ್ಚಿ: ರಾಜತಾಂತ್ರಿಕ ಮಾರ್ಗಗಳನ್ನು ದುರುಪಯೋಗಪಡಿಸಿಕೊಂಡು ಅಕ್ರಮವಾಗಿ ಚಿನ್ನ ಸಾಗಣೆ ಮಾಡಲು ನೆರವಾದ ಆರೋಪದಡಿ ಅಮಾನತುಗೊಂಡಿರುವ  ಹಿರಿಯ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್ ಅವರನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಎರಡನೇ ಬಾರಿಗೆ ವಿಚಾರಣೆಗೆ ಒಳಪಡಿಸಿದರು.

ಶಿವಶಂಕರ್ ಅವರನ್ನು ತಿರುವನಂತಪುರದ ಪೆರೂಕಾರ್ಡ್‌ ಪೊಲೀಸ್ ಕ್ಲಬ್‌ನಲ್ಲಿ ಸುಮಾರು 5 ಗಂಟೆಗಳ ಕಾಲ ಅಧಿಕಾರಿಗಳು ವಿಚಾರಣೆ ನಡೆಸಿದರು. ಜುಲೈ 15ರಿಂದ ಈ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‌ಐಎ ತಂಡ, ಈ ಮುಂಚೆ ಒಮ್ಮೆ ಶಿವಶಂಕರ್ ಅವರನ್ನು ಪ್ರಶ್ನಿಸಿತ್ತು.

ಅಕ್ರಮವಾಗಿ ಚಿನ್ನ ಸಾಗಣೆ ಮಾಡಿದ ಆರೋಪಿಗಳೊಂದಿಗೆ ನಂಟು ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಶಿವಶಂಕರ್ ಅವರನ್ನು ಮುಖ್ಯಮಂತ್ರಿ‌ ಪಿಣರಾಯಿ ವಿಜಯನ್‌ ಅವರು ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಬಿಡುಗಡೆಗೊಳಿಸಿದ್ದರು. ಇದಾದ ಬಳಿಕ ಅವರನ್ನು ಅಮಾನತುಗೊಳಿಸಲಾಗಿತ್ತು.

ತಿರುವನಂತಪುರದ ವಿಮಾನ ನಿಲ್ದಾಣದಲ್ಲಿ ಚಿನ್ನ ಕಳ್ಳ ಸಾಗಣೆಯನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಹಚ್ಚಿದ ಬಳಿಕ ಆರೋಪಿಗಳನ್ನು ಬಂಧಿಸಿ, 30 ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದ್ದು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಸರಿತಾ, ಸ್ವಪ್ನಾ ಸುರೇಶ್, ಸಂದೀಪ್ ನಾಯರ್ ಮತ್ತು ಫೈಜಲ್ ಫರೀದ್ ಅವರ ವಿರುದ್ಧ ಈಗಾಗಲೇ ಪ್ರಕರಣ ದಾಖಲಿಸಲಾಗಿದೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು