ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಮತ್ತಷ್ಟು ಆ್ಯಪ್‌ಗಳಿಗೆ ನಿಷೇಧದ ಶಿಕ್ಷೆ

ಅಕ್ಷರ ಗಾತ್ರ

ನವದೆಹಲಿ: ಕಳೆದ ತಿಂಗಳು ಚೀನಾದ 59 ಆ್ಯಪ್‌ಗಳನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ ಮತ್ತಷ್ಟು ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.

ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆಪ್ ಸ್ಟೋರ್‌ನಿಂದ ‘ಹೆಲೋ ಲೈಟ್’, ‘ಶೇರ್‌ಇಟ್ ಲೈಟ್’, ‘ಬಿಗೊ ಲೈಟ್’ ಮತ್ತು ‘ವಿಎಫ್‌ವೈ ಲೈಟ್‌’ನಂತಹ ಅಪ್ಲಿಕೇಶನ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ‘ಹಿಂದುಸ್ಥಾನ್‌ ಟೈಮ್ಸ್‌’ ವರದಿ ಮಾಡಿದೆ.

‘ನಿಷೇಧಕ್ಕೆ ಗುರಿಯಾದ ಆ್ಯಪ್‌ಗಳು ಬೇರೆಯ ಆವೃತ್ತಿಯ ಮೂಲಕ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಹೀಗಾಗಿ ಅವುಗಳನ್ನು ಅಪ್ಲಿಕೇಶನ್ ಸ್ಟೋರ್‌ಗಳಿಂದ ಕಿತ್ತೊಗೆಯಲಾಗಿದೆ’ ಎಂದು ಐಟಿ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ದೇಶದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆ ವಿಚಾರವಾಗಿ ಈ ಆ್ಯಪ್‌ಗಳು ಪೂರ್ವಾಗ್ರಹ ಪೀಡನೆಗೆ ಒಳಗಾಗಿವೆ,’ ಎಂದು ಸಚಿವಾಲಯ ತಿಳಿಸಿದೆ.
ಗಾಲ್ವಾನ್ ಕಣಿವೆಯಲ್ಲಿ ಭಾರತ ಮತ್ತು ಚೀನಾದ ನಡುವೆ ಸಂಘರ್ಷ ನಡೆದ ನಂತರ ಟಿಕ್‌ಟಾಕ್, ಶೇರ್‌ಇಟ್ ಸೇರಿದಂತೆ 59 ಆ್ಯಪ್‌ಗಳನ್ನು ನಿಷೇಧಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT