ಮಹಾರಾಷ್ಟ್ರ ರಾಜಭವನದ 18 ನೌಕರರಿಗೆ ಕೊರೊನಾ ಸೋಂಕು: ರಾಜ್ಯಪಾಲರು ಕ್ವಾರಂಟೈನ್

ಮುಂಬೈ: ಇಲ್ಲಿನ ರಾಜಭವನದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕನಿಷ್ಠ 18 ನೌಕರರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.
ಕೋವಿಡ್ ಪತ್ತೆಯಾಗಿರುವ ಕೆಲ ಸಿಬ್ಬಂದಿ ಮಹಾರಾಷ್ಟ್ರ ರಾಜ್ಯಪಾಲರ ಜೊತೆ ನಿಟಕ ಸಂಪರ್ಕದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ವಾರ ರಾಜಭವನದ ನೌಕರರಿಬ್ಬರಿಗೆ ಕೋವಿಡ್ ಇರುವುದು ದೃಢವಾಗಿತ್ತು. ಆ ಹಿನ್ನೆಲೆಯಲ್ಲಿ ಸುಮಾರು 100 ನೌಕರರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅದರಲ್ಲಿ 16 ಮಂದಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು ಆತಂಕಕ್ಕೆ ಕಾರಣವಾಗಿದೆ.
ಮುಂಬೈ ಮಹಾನಗರ ಕೊರೊನಾ ಸೋಂಕಿನ ಕೇಂದ್ರಬಿಂದುವಾಗಿದ್ದು, ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.