ಶನಿವಾರ, ಸೆಪ್ಟೆಂಬರ್ 18, 2021
28 °C

ಮಾಸ್ಟರ್‌ ಪ್ಲಾನ್‌ ಉಲ್ಲಂಘನೆ: ಪಿಟಿಐಗೆ ದಂಡ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ತನ್ನ ಕಚೇರಿ ಕಟ್ಟಡದ ಮಾಸ್ಟರ್‌ ಪ್ಲಾನ್‌ ಅನ್ನು ಉಲ್ಲಂಘಿಸಿದ್ದಕ್ಕಾಗಿ ₹84.48 ಕೋಟಿ ದಂಡ ಪಾವತಿಸುವಂತೆ ಕೇಂದ್ರದ ವಸತಿ ಹಾಗೂ ನಗರ ವ್ಯವಹಾರಗಳ ಸಚಿವಾಲಯವು ಸುದ್ದಿಸಂಸ್ಥೆ ಪಿಟಿಐಗೆ ನೋಟಿಸ್‌ ಜಾರಿ ಮಾಡಿದೆ. ಭೂ ಮತ್ತು ಅಭಿವೃದ್ಧಿ ಕಚೇರಿಯ ಮುಖಾಂತರ ಜುಲೈ 7ರಂದು ಈ ನೋಟಿಸ್‌ ಜಾರಿಗೊಳಿಸಲಾಗಿದೆ.

‘ನೋಟಿಸ್‌ ಜಾರಿ ಮಾಡಿದ 30 ದಿನಗಳೊಳಗಾಗಿ ಅಗತ್ಯ ನಿಯಮಗಳನ್ನು ಪಾಲಿಸದಿದ್ದರೆ ಕಟ್ಟಡದ ಪ್ರವೇಶವನ್ನು ನಿರ್ಬಂಧಿಸಲಾಗುವುದು. ನಿಗದಿತ ಅವಧಿಯೊಳಗೆ ದಂಡ ಪಾವತಿಸಲು ವಿಫಲವಾದಲ್ಲಿ ಆ ಮೊತ್ತಕ್ಕೆ ಶೇ 10ರಷ್ಟು ಬಡ್ಡಿಯನ್ನು ನೀಡಬೇಕಾಗುತ್ತದೆ’ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಸುದ್ದಿ ಸಂಸ್ಥೆ ಪಿಟಿಐ ಇತ್ತೀಚೆಗೆ ಚೀನಾದ ರಾಯಭಾರಿ ಸನ್‌ ವೀಸಾಂಗ್‌ ಅವರ ಸಂದರ್ಶನ ನಡೆಸಿತ್ತು. ಅಲ್ಲಿ ಅವರು ‘ಲಡಾಖ್‌ನಲ್ಲಿ ನಡೆದಿದ್ದ ಹಿಂಸಾತ್ಮಕ ಸಂಘರ್ಷಕ್ಕೆ ಭಾರತ ಸರ್ಕಾರವೇ ಹೊಣೆ’ ಎಂದು ಆರೋಪಿಸಿದ್ದರು. ಇದಾಗುತ್ತಿದ್ದಂತೆಯೇ, ಪಿಟಿಐ ಜತೆಗಿನ ಸಂಬಂಧವನ್ನು ಕೊನೆಗೊಳಿಸುವುದಾಗಿ ಸರ್ಕಾರಿ ಸ್ವಾಮ್ಯದ ‘ಪ್ರಸಾರ ಭಾರತಿ’ ಸಂಸ್ಥೆಯು ಬೆದರಿಕೆ ಹಾಕಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು