ಭಾನುವಾರ, ಆಗಸ್ಟ್ 1, 2021
27 °C

‘ಕಿಲ್‌ ಕೊರೊನಾ’ ಅಭಿಯಾನ: ಮಾಸ್ಕ್‌ ಧರಿಸದಿದ್ದಲ್ಲಿ ಸ್ವಯಂ ಸೇವಕರಾಗಲು ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಗ್ವಾಲಿಯರ್‌ (ಮಧ್ಯಪ್ರದೇಶ)‌: ಇಲ್ಲಿನ ಸಾರ್ವಜನಿಕ ಸ್ಥಳದಲ್ಲಿ ಕೋವಿಡ್‌–19 ಮಾರ್ಗಸೂಚಿ ಅನುಸರಿಸದಿದ್ದಲ್ಲಿ ಮೂರು ದಿನಗಳ ಕಾಲ ಆಸ್ಪತ್ರೆ ಮತ್ತು ಪೊಲೀಸ್‌ ಚೆಕ್‌ಪೋಸ್ಟ್‌ನಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡಬೇಕಾಗುತ್ತದೆ. ಅಷ್ಟೇ ಅಲ್ಲದೆ ನಿಯಮ ಉಲ್ಲಂಘನೆಗಾಗಿ ದಂಡ ಕೂಡ ಕಟ್ಟಬೇಕು ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದರು. 

ಗ್ವಾಲಿಯರ್‌ ಜಿಲ್ಲಾಧಿಕಾರಿ‌ ಕುಶಲೇಂದ್ರ ವಿಕ್ರಂ ಸಿಂಗ್‌ ನೇತೃತ್ವದಲ್ಲಿ ‘ಕಿಲ್‌ ಕೊರೊನಾ’ ಅಭಿಯಾನಕ್ಕೆ ಸಂಬಂಧಿಸಿದಂತೆ ಸಭೆ ನಡೆಸಲಾಗಿತ್ತು. ಆ ಬಳಿಕ ಮಧ್ಯಪ್ರದೇಶದ ಜಿಲ್ಲಾ ಆಡಳಿತವು ಈ ನಿಯಮವನ್ನು ಜಾರಿಗೊಳಿಸುವಂತೆ ಆದೇಶಿಸಿದೆ. 

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸದೆ ಕೋವಿಡ್‌–19 ಮಾರ್ಗಸೂಚಿಯನ್ನು ಉಲ್ಲಂಘಿಸುವವರು ದಂಡದೊಂದಿಗೆ ಆಸ್ಪತ್ರೆ ಮತ್ತು ಚೆಕ್‌ಪೋಸ್ಟ್‌ನಲ್ಲಿ ಸ್ವಯಂ ಸೇವಕರಾಗಿ ಮೂರು ದಿನ ಕೆಲಸ ಮಾಡಬೇಕು ಎಂದು ಆದೇಶದಲ್ಲಿ ಹೇಳಲಾಗಿದೆ.

ಇಂದೋರ್‌, ಭೋಪಾಲ್‌ ಮತ್ತು ಇತರೆ ರಾಜ್ಯಗಳಿಂದ ಗ್ವಾಲಿಯರ್‌ಗೆ ಆಗಮಿಸುವವರನ್ನು ಕಡ್ಡಾಯವಾಗಿ ಪರೀಕ್ಷೆಗೆ ಒಳಪಡಿಸುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ‌ ಸೂಚಿಸಿದರು.

 

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು