ಮಂಗಳವಾರ, ಆಗಸ್ಟ್ 3, 2021
27 °C

ಅಸ್ಸಾಂ: ಮಳೆಯಿಂದ ಪ್ರವಾಹ, ಅಣೆಕಟ್ಟೆ ಒಡೆದು ಗ್ರಾಮಗಳ ಮುಳುಗಡೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಅಸ್ಸಾಂ: ನಿರಂತರ ಮಳೆಯಿಂದಾಗಿ ಬ್ರಹ್ಮಪುತ್ರ ನದಿಯ ನೀರಿನ ಮಟ್ಟದಲ್ಲಿ ಏರಿಕೆ ಉಂಟಾಗಿ ಅಸ್ಸಾಂನ ದುಬ್ರಿ ಜಿಲ್ಲೆಯ ಅಣೆಕಟ್ಟು ಒಡೆದು ಪ್ರವಾಹ ಉಂಟಾಗಿದೆ. ಇದರಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಕಳೆದ ಮೂರು ದಿನಗಳಿಂದ ಬ್ರಹ್ಮಪುತ್ರ ನದಿಪಾತ್ರದಲ್ಲಿ ಮಳೆಯಾಗುತ್ತಿದ್ದು, ನದಿ ಮಟ್ಟಕ್ಕಿಂತ ಹೆಚ್ಚಿನ ನೀರು ಹರಿಯುತ್ತಿದೆ. ಇದರಿಂದಾಗಿ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನ ಜಾನುವಾರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ನದಿಯಲ್ಲಿ ಹೆಚ್ಚಿನ ನೀರು ಹರಿದ ಪರಿಣಾಮ ಇಲ್ಲಿನ ಅಣೆಕಟ್ಟೆಯೊಂದು ಒಡೆದು, ಹಲವು ಗ್ರಾಮಗಳು ಮುಳುಗಡೆಯಾಗಿವೆ ಎಂದು ಅಸ್ಸಾಂ ಸರ್ಕಾರ ತಿಳಿಸಿದೆ.

ಇಲ್ಲಿನ ದಿಬ್ರುಗರ್ ಪ್ರದೇಶದ ಮೋಹ್ನಾ ಗ್ರಾಮದಲ್ಲಿ ಅತಿ ಹೆಚ್ಚು ಹಾನಿ ಸಂಭವಿಸಿದ್ದು ಹಲವು ಮನೆಗಳು ಮುಳುಗಡೆಯಾಗಿವೆ. ಜನರು ಮನೆ, ಆಹಾರ ಸಾಮಗ್ರಿಗಳಿಗಾಗಿ ಪರದಾಡುತ್ತಿದ್ದಾರೆ. ಬ್ರಹ್ಮಪುತ್ರ ನದಿಯಲ್ಲಿ ಅಪಾಯದ ಮಟ್ಟದಲ್ಲಿ ನೀರು ಹರಿಯುತ್ತಿದ್ದು ತೀವ್ರತೊಂದರೆಯುಂಟಾಗಿದೆ.

ಪಶ್ಚಿಮಬಂಗಾಳ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ಸಿಕ್ಕಿಂ ರಾಜ್ಯಗಳಲ್ಲಿ ಶುಕ್ರವಾರ ಸುರಿದ ಮಳೆಯಿಂದಾಗಿ ಹಲವು ನದಿಗಳು ತುಂಬಿ ಹರಿಯುತ್ತಿವೆ. ಪರಿಣಾಮ ನದಿಗಳ ಅಕ್ಕಪಕ್ಕದ ತಗ್ಗು ಪ್ರದೇಶಗಳ ಗ್ರಾಮಗಳಲ್ಲಿ ಸಂಕಷ್ಟಕ್ಕೆ ಈಡಾಗಿರುವ ಜನ ಜಾನುವಾರುಗಳನ್ನು ಸರ್ಕಾರಗಳು ಸ್ಥಳಾಂತರಿಸುವ ಕಾರ್ಯ ಆರಂಭಿಸಿವೆ ಎಂದು ವರದಿಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು