ಸೋಮವಾರ, ಸೆಪ್ಟೆಂಬರ್ 28, 2020
23 °C

ಮಹಾರಾಷ್ಟ್ರ: ಮುಂಬೈ, ಥಾಣೆ ಸೇರಿ ಹಲವೆಡೆ ಭಾರಿ ಮಳೆ, ನೆರೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಮುಂಬೈ: ಮುಂಬೈ, ಮುಂಬೈ ಉಪನಗರ ಹಾಗೂ ಉತ್ತರ ಕೊಂಕಣ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಭಾರಿ ಮಳೆಯಾಗಿದೆ. ಹಲವೆಡೆ ನೆರೆ ಉಂಟಾಗಿದ್ದು ರಸ್ತೆ ಮತ್ತು ರೈಲು ಸಂಚಾರಕ್ಕೆ ಅಡಚಣೆಯಾಗಿದೆ.

ಮುಂಬೈಯ ಕಿಂಗ್ಸ್ ಸರ್ಕಲ್, ಹಿಂದ್‌ಮಾತಾ, ಪೋಸ್ಟಲ್ ಕಾಲೋನಿ, ಅಂಧೇರಿ ಸಬ್‌ವೇ ಪ್ರದೇಶಗಳು ಬಹುತೇಕ ಜಲಾವೃತಗೊಂಡಿವೆ. ಪರಿಹಾರ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ಮಧ್ಯೆ, ಮುಂಬೈ ನಗರದಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

'ನಗರದಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರೆಡ್ ಅಲರ್ಟ್ ಘೋಷಿಸಲಾಗಿದೆ' ಎಂದು ಹವಾಮಾನ ಇಲಾಖೆಯ ಉಪಪ್ರಧಾನ ನಿರ್ದೇಶಕ ಕೆ.ಎಸ್.ಹೊಸಾಲಿಕರ್ ತಿಳಿಸಿದ್ದಾರೆ.

ಥಾಣೆ, ಪಾಲ್ಘರ್, ರಾಯಗಡ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಿದೆ. ಜನರು ಮನೆಯಲ್ಲಿಯೇ ಇರುವಂತೆ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಸೂಚಿಸಿದೆ.

'ಹವಾಮಾನ ಇಲಾಖೆ ವರದಿ ಪ್ರಕಾರ, ಮುಂಬೈ ಮತ್ತು ಉಪನಗರಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತೀರಾ ಅನಿವಾರ್ಯವಲ್ಲದ ಹೊರತು ನಗರವಾಸಿಗಳು ಮನೆಯಿಂದ ಹೊರಬರಬಾರದೆಂದು ಮನವಿ. ಜಲಾವೃತ ಪ್ರದೇಶಗಳಿಂದ ದೂರವಿರಿ' ಎಂದು ಬಿಎಂಸಿ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು