ಗುರುವಾರ , ಆಗಸ್ಟ್ 5, 2021
21 °C

ಮುಂಬೈನಲ್ಲಿ ಭಾರೀ ಮಳೆ; ರಸ್ತೆಗಳು ಜಲಾವೃತ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

mumbai rain

ಮುಂಬೈ: ಮುಂಬೈನಲ್ಲಿ ಶುಕ್ರವಾರ ಬೆಳಗ್ಗೆ 10.30ರ ವರೆಗೆ 10 ಸೆಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂಬೈ ಮತ್ತು ಸಮೀಪದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಜನರು ಮನೆಯೊಳಗೆ ಇರುವಂತೆ ಮುಂಬೈ ಪೊಲೀಸರು ಮನವಿ ಮಾಡಿದ್ದು, ಹೊರಗೆ ಹೋಗುವುದಾದರೆ ಮುಂಜಾಗ್ರತಾ ಕ್ರಮಗಳನ್ನು ವಹಿಸಿ ಎಂದಿದ್ದಾರೆ.

ಸಿಯಾನ್, ಕಿಂಗ್ ಸರ್ಕಲ್, ಹಿಂದ್‌ಮಠ, ದಾದರ್ ಮತ್ತು ಇತರ ತಗ್ಗು ಪ್ರದೇಶಗಳಲ್ಲಿ ರಸ್ತೆ ಜಲಾವೃತವಾಗಿದ್ದು ವಾಹನ ಸಂಚಾರಕ್ಕೆ ಅಡಚಣೆಯುಂಟಾಗಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು