ಸೋಮವಾರ, ಜುಲೈ 26, 2021
27 °C
ಹರಿಯಾಣ ಪೊಲೀಸ್‌ ಸಿಬ್ಬಂದಿ ಹತ್ಯೆ ಪ್ರಕರಣ: ಐವರು ಆರೋಪಿಗಳ ಬಂಧನ

ಹರಿಯಾಣ | ಸಾವಿಗೂ ಮುನ್ನ ಆರೋಪಿಗಳ ವಾಹನ ಸಂಖ್ಯೆ ಅಂಗೈಯಲ್ಲಿ ಬರೆದ ಪೊಲೀಸ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಂಡೀಗಡ: ತನ್ನನ್ನು ಹತ್ಯೆ ಮಾಡಿದ ಆರೋಪಿಗಳ ವಾಹನ ಸಂಖ್ಯೆಯನ್ನು ಹರಿಯಾಣದ ಪೊಲೀಸ್‌ ಸಿಬ್ಬಂದಿಯೊಬ್ಬರು, ಸಾಯುವ ಮುನ್ನ ತನ್ನ ಅಂಗೈಯಲ್ಲೇ ಬರೆದಿಟ್ಟು, ಸಮಯ ಪ್ರಜ್ಞೆ ಮೆರೆದಿದ್ದಾರೆ. ಇದನ್ನೇ ಆಧಾರವಾಗಿಟ್ಟುಕೊಂಡು ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.  

ಕಳೆದ ಮಂಗಳವಾರ ಸೋನಿಪತ್‌ ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ಸಿಂಗ್‌ ಹಾಗೂ 43 ವರ್ಷದ ವಿಶೇಷ ಪೊಲೀಸ್‌ ಅಧಿಕಾರಿ ಕಪ್ತಾನ್‌ ಸಿಂಗ್‌ ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿತ್ತು. ಇಬ್ಬರು ಪೊಲೀಸ್‌ ಸಿಬ್ಬಂದಿ ಹತ್ಯೆ ಪ್ರಕರಣದಲ್ಲಿ ಆರು ಆರೋಪಿಗಳ ಪೈಕಿ ಐವರನ್ನು ಬಂಧಿಸಲಾಗಿದೆ ಎಂದು ಹರಿಯಾಣ ಪೊಲೀಸರು ತಿಳಿಸಿದ್ದಾರೆ. ಮತ್ತೊಬ್ಬ ಆರೋಪಿ ಜಿಂದ್‌ ಜಿಲ್ಲೆಯಲ್ಲಿ ಪೊಲೀಸರ ಗುಂಡಿಗೆ ಸಾವನ್ನಪಿದ್ದಾನೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.  

ಹತ್ಯೆಯಾದ ಪೊಲೀಸ್‌ ಸಿಬ್ಬಂದಿ ಪೈಕಿ 28 ವರ್ಷದ ರವೀಂದರ್‌ ಸಿಂಗ್‌, ಸಾವಿಗೂ ಮುನ್ನ ತಮ್ಮ ಅಂಗೈಯಲ್ಲಿ ಆರೋಪಿಗಳ ವಾಹನ ಸಂಖ್ಯೆಯಲ್ಲಿ ಬರೆದಿದ್ದರು. ಈ ಸಂಖ್ಯೆಯನ್ನೇ ಬಳಸಿಕೊಂಡು ಪೊಲೀಸರು ಆರೋಪಿಗಳ ಬಂಧನಕ್ಕೆ ಕಾರ್ಯಾಚರಣೆ ನಡೆಸಿದ್ದರು. 

‘ಮೃತದೇಹದ ಮರಣೋತ್ತರ ಪರೀಕ್ಷೆ ಸಂದರ್ಭದಲ್ಲಿ ಸಿಂಗ್‌ ಅಂಗೈಯಲ್ಲಿದ್ದ ಸಂಖ್ಯೆ ಬೆಳಕಿಗೆ ಬಂದಿತ್ತು. ಮರಣೋತ್ತರ ಪೊಲೀಸ್‌ ಪದಕಕ್ಕೆ ರವೀಂದರ್‌ ಸಿಂಗ್‌ ಅವರ ಹೆಸರನ್ನು ಶಿಫಾರಸು ಮಾಡಲಾಗುವುದು’ ಎಂದು ಹರಿಯಾಣ ಪೊಲೀಸ್‌ ಮುಖ್ಯಸ್ಥ ಮನೋಜ್‌ ಯಾದವ್‌ ತಿಳಿಸಿದರು.     

ಘಟನೆ ವಿವರ: ಸೋನಿಪತ್‌–ಜಿಂದ್‌ ರಸ್ತೆಯಲ್ಲಿ ಕಾರಿನಲ್ಲಿ ಕುಳಿತು ಮದ್ಯ ಸೇವಿಸುತ್ತಿದ್ದ ಆರೋಪಿಗಳನ್ನು ರವೀಂದರ್‌ ಸಿಂಗ್‌ ಹಾಗೂ ಕಪ್ತಾನ್‌ ಸಿಂಗ್‌ ತಡೆದಿದ್ದರು. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿದ್ದು, ಆರೋಪಿಗಳು ಹರಿತವಾದ ಆಯುಧಗಳಿಂದ ಹಲ್ಲೆ ಮಾಡಿ, ಜಿಂದ್‌ ಕಡೆಗೆ ಪರಾರಿಯಾಗಿದ್ದರು. 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು