ಭಾನುವಾರ, ಆಗಸ್ಟ್ 1, 2021
27 °C
8.2 ಲಕ್ಷ ಜನರಿಗೆ ತಗುಲಿದ ಕೋವಿಡ್–19

Covid-19 India update | 27,114 ಹೊಸ ಪ್ರಕರಣ; ಏರುತ್ತಲೇ ಇದೆ ಸೋಂಕಿತರ ಸಂಖ್ಯೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಬರೋಬ್ಬರಿ 27,114 ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದ್ದು, ಇದೇ ವೇಳೆ 519  ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8,20,916 ಗೆ ಏರಿಕೆಯಾಗಿದೆ. ಇದರಲ್ಲಿ 5,15,385 ಮಂದಿ ಗುಣಮುಖರಾಗಿದ್ದು, ಇನ್ನೂ 2,83,407 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತಪಟ್ಟವರ ಸಂಖ್ಯೆ 22,123ಕ್ಕೆ ತಲುಪಿದೆ.

ಶುಕ್ರವಾರ ಒಂದೇದಿನ 2,82,511 ಜನರ ಮಾದರಿ ಪರೀಕ್ಷೆ ನಡೆಸಲಾಗಿದ್ದು, ದೇಶದಲ್ಲಿ ಸೋಂಕು ಕಾಣಿಸಿಕೊಂಡಾಗಿನಿಂದ ಇಲ್ಲಿಯವರೆಗೆ ಒಟ್ಟು 1,13,07,002 ಜನರನ್ನು ಪರೀಕ್ಷಿಸಲಾಗಿದೆ.

ಮಹಾರಾಷ್ಟ್ರದಲ್ಲಿ  ಶುಕ್ರವಾರ 7,862 ಹೊಸ ಪ್ರಕರಣಗಳು ವರದಿಯಾಗಿವೆ. ಇಲ್ಲಿ ಇದುವರೆಗೆ ಒಟ್ಟು 2,38,461 ಮಂದಿಗೆ ಸೋಂಕು ತಗುಲಿದ್ದು, 1,32,625 ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 95,943 ಪ್ರಕರಣಗಳು ಸಕ್ರಿಯವಾಗಿವೆ. 9,893 ಜನರು ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 3,680 ಹೊಸ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಒಟ್ಟಾರೆ 1,30,261 ಮಂದಿಗೆ ಸೋಂಕು ತಗುಲಿದಂತಾಗಿದೆ. ಇನ್ನೂ 46,108 ಪ್ರಕರಣಗಳು ಸಕ್ರಿಯವಾಗಿವೆ. ಇದುವರೆಗೆ 82,324 ಮಂದಿ ಗುಣಮುಖರಾಗಿದ್ದು, 1,829 ಜನರು ಮೃತಪಟ್ಟಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಟ್ಟು 1 09,140 ಮಂದಿಗೆ ಸೋಂಕು ತಗುಲಿದೆ. 3,300 ಸಾವಿನ ಪ್ರಕರಣಗಳು ವರದಿಯಾಗಿದೆ. ಉಳಿದಂತೆ 84,694 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಇನ್ನೂ 21,146 ಪ್ರಕರಣಗಳು ಸಕ್ರಿಯವಾಗಿವೆ.

ಗುಜರಾತ್‌ನಲ್ಲಿ ಒಟ್ಟಾರೆ 40,069 ಜನರಿಗೆ ಸೋಂಕು ತಗುಲಿದೆ. 9,900 ಸಕ್ರಿಯ ಪ್ರಕರಣಗಳಿದ್ದು, 28,147 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 2,022 ಮಂದಿ ಮೃತಪಟ್ಟಿದ್ದಾರೆ.

ಹೆಚ್ಚು ಸೋಂಕು ಪ್ರಕರಣಗಳು ವರದಿಯಾಗಿರುವ ರಾಜ್ಯಗಳ ಪಟ್ಟಿಯಲ್ಲಿ 6ನೇ ಸ್ಥಾನದಲ್ಲಿರುವ ಕರ್ನಾಟಕದಲ್ಲಿ ಶುಕ್ರವಾರ ಸಂಜೆ 5 ಗಂಟೆ ವರೆಗೆ ಸೋಂಕಿತರ ಸಂಖ್ಯೆ 33,418ಕ್ಕೆ ಏರಿಕೆಯಾಗಿದೆ. 543 ಮಂದಿ ಸಾವಿಗೀಡಾಗಿದ್ದಾರೆ. ಪ್ರಸ್ತುತ 13,836 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇನ್ನೂ 19,035 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು