ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಏಕತೆಗೆ ಶ್ರಮಿಸಿದ ಶ್ಯಾಮ ಪ್ರಸಾದ್ ಮುಖರ್ಜಿ ಸ್ಮರಿಸಿದ ಪ್ರಧಾನಿ ಮೋದಿ

Last Updated 6 ಜುಲೈ 2020, 4:02 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜನಸಂಘದ ಸಂಸ್ಥಾಪಕರು, ಭಾರತದ ಅಖಂಡತೆ ಹಾಗೂ ಏಕತೆಗಾಗಿ ಶ್ರಮಿಸಿದ ಡಾ. ಶ್ಯಾಮ ಪ್ರಸಾದ್ ಮುಖರ್ಜಿಯವರ ಜಯಂತಿಯ ದಿನವಾದ ಇಂದು ( ಜು. 6) ಪ್ರಧಾನಿ ನರೇಂದ್ರ ಮೋದಿ ಅವರು ಮುಖರ್ಜಿಯವರನ್ನು ಸ್ಮರಿಸಿದ್ದಾರೆ.

ದೇಶಭಕ್ತರಾಗಿದ್ದ ಶ್ಯಾಮ ಪ್ರಸಾದ್‌ ಮುಖರ್ಜಿ ಅವರು ಭಾರತದ ಅಭಿವೃದ್ಧಿಗೆ ಆದರ್ಶ ಪ್ರಾಯವಾದ ಕೊಡುಗೆಗಳನ್ನು ನೀಡಿದ್ದಾರೆ. ದೇಶದ ಏಕತೆಗಾಗಿ ದಿಟ್ಟತನದಿಂದ ಶ್ರಮಿಸಿದ್ದಾರೆ. ಅವರ ಚಿಂತನೆಗಳು, ಆದರ್ಶಗಳು ದೇಶದ ಲಕ್ಷಾಂತರ ಜನತೆಗೆ ಶಕ್ತಿ ತುಂಬಿವೆ ಎಂದು ನರೇಂದ್ರ ಮೋದಿ ಸೋಮವಾರ ಟ್ವೀಟ್ ಮಾಡಿದ್ದಾರೆ.

ಭಾರತದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ಶ್ಯಾಮ ಪ್ರಸಾದ್‌ ಮುಖರ್ಜಿ ಅವರ ಸೇವೆಯನ್ನು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಸ್ಮರಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಟ್ವೀಟ್‌ ಮಾಡುವ ಮೂಲಕ ಮುಖರ್ಜಿ ಅವರ ಕೊಡುಗೆಗಳನ್ನು ಸ್ಮರಿಸಿದ್ದಾರೆ.

ಶ್ಯಾಮ ಪ್ರಸಾದ್‌ ಮುಖರ್ಜಿ ಅವರು ಜುಲೈ 6, 1901 ರಂದು ಕೋಲ್ಕತ್ತಾದಲ್ಲಿ ಜನಿಸಿದರು. ಬ್ರಿಟಿಷ್‌ ಆಡಳಿತದಲ್ಲಿ ಬ್ಯಾರಿಸ್ಟರ್ ಆಗಿದ್ದರು. ರಾಜಕಾರಣಿ ಮತ್ತು ಶಿಕ್ಷಣ ತಜ್ಞರಾಗಿದ್ದ ಅವರು ಜವಾಹರಲಾಲ್ ನೆಹರೂ ಸಂಪುಟದಲ್ಲಿ ಕೈಗಾರಿಕೆ ಸಚಿವರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT