ಶುಕ್ರವಾರ, ಜುಲೈ 30, 2021
20 °C
ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದ ಘಟನೆ

ಗುಂಡಿನ ಚಕಮಕಿ: ರೌಡಿಶೀಟರ್ ಹತ್ಯೆ, ಪೊಲೀಸ್‌ಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ರೌಡಿಶೀಟರ್ ಮತ್ತು ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದೆ. ರೌಡಿಶೀಟರ್ ಮೃತಪಟ್ಟಿದ್ದು, ಸಬ್ ಇನ್‌ಸ್ಪೆಕ್ಟರ್‌ ಒಬ್ಬರು ಗಾಯಗೊಂಡಿದ್ದಾರೆ ಎಂದು ಗುರುವಾರ ಅಧಿಕಾರಿಗಳು ತಿಳಿಸಿದ್ದಾರೆ.

‘ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ದೀಪಕ್ ಸಿದ್ದು ಮೃತಪಟ್ಟವನು. ಈತನ ಬಗ್ಗೆ ಸುಳಿವು ಕೊಟ್ಟವರಿಗೆ ₹ 50 ಸಾವಿರ ಬಹುಮಾನವನ್ನೂ ಘೋಷಿಸಲಾಗಿತ್ತು’ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಕುಮಾರ್ ಸಾಹ್ನಿ ತಿಳಿಸಿದ್ದಾರೆ.

ದೀಪಕ್ ಸಿದ್ದು ವಿರುದ್ಧ ಕೊಲೆ, ಲೂಟಿ ಮತ್ತು ದೌರ್ಜನ್ಯ ಸೇರಿದಂತೆ ಒಂದೂವರೆ ಡಜನ್‌ಗಿಂತಲೂ ಹೆಚ್ಚಿನ ಪ್ರಕರಣಗಳು ದಾಖಲಾಗಿದ್ದವು.

‘ಸಹಚರರೊಂದಿಗೆ ತಾನಿದ್ದ ಸ್ಥಳಕ್ಕೆ ಬಂದ ಪೊಲೀಸರ ಮೇಲೆ ಸಿದ್ದು ಗುಂಡಿನ ದಾಳಿ ನಡೆಸಿದ. ಆಗ ಸಬ್‌ ಇನ್‌ಸ್ಪೆಕ್ಟರ್ ಒಬ್ಬರು ಗಾಯಗೊಂಡರು. ಪೊಲೀಸರೂ ಪ್ರತಿ ದಾಳಿ ನಡೆಸಿದರು. ಗಾಯಗೊಂಡ ದೀ‍‍‍ಪಕ್‍ನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಆತ ಮೃತಪಟ್ಟ' ಎಂದು ಪೊಲೀಸರು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು