ಗುರುವಾರ , ಆಗಸ್ಟ್ 5, 2021
23 °C

ಹೈದರಾಬಾದ್: ₹1.03 ಕೋಟಿ ಮೌಲ್ಯದ ವಿದೇಶಿ ಸಿಗರೇಟ್ ವಶ, 5 ಮಂದಿ ಬಂಧನ

ಎಎನ್ಐ Updated:

ಅಕ್ಷರ ಗಾತ್ರ : | |

ಹೈದರಾಬಾದ್: ಅಕ್ರಮವಾಗಿ ಸಂಗ್ರಹಿಸಿ ಸಾಗಿಸಲಾಗುತ್ತಿದ್ದ ವಿದೇಶಿ ಸಿಗರೇಟನ್ನು ನಗರದ ಶಹಿನಾಯತ್‌ಗಂಜ್ ಪೊಲೀಸರು ಪತ್ತೆ ಹಚ್ಚಿರುವುದಲ್ಲದೆ, ಐದು ಮಂದಿಯನ್ನು ಬಂಧಿಸಿ ಅವರಿಂದ ₹1.03 ಕೋಟಿ ಬೆಲೆಯ ಸಿಗರೇಟನ್ನು ವಶಪಡಿಸಿಕೊಂಡಿದ್ದಾರೆ.

ಪೊಲೀಸರು ಸಿದ್ದಿಯಾ ಬಜಾರ್ ಸಮೀಪ ಅನುಮಾನಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಆಟೋ ಒಂದನ್ನು ತಡೆದು ತಪಾಸಣೆಗೆ ಒಳಪಡಿಸಿದಾಗ ಅಲ್ಲಿ ವಿದೇಶಿ ಸಿಗರೇಟ್ ಇರುವುದು ಕಂಡು ಬಂತು. ತಪಾಸಣೆ ನಡೆಸಿದಾಗ ಸಿಗರೇಟನ್ನು ಅಕ್ರಮವಾಗಿ ಆಮದು ಮಾಡಿಕೊಂಡು ಮಾರಾಟ ಮಾಡಲು ಸಾಗಿಸಲಾಗುತ್ತಿತ್ತು ಎಂಬ ವಿಷಯ ಬಹಿರಂಗಗೊಂಡಿತು. ಕೂಡಲೆ ಆಟೋ ಚಾಲಕ ಸೇರಿದಂತೆ ಅಕ್ರಮವಾಗಿ ಸಾಗಾಟ ನಡೆಸಲು ಕಾರಣರಾದ ಐದು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ ಸಿಗರೇಟನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೈದರಾಬಾದ್ ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು