ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‍ ಎನ್‍ಕೌಂಟರ್‌: ತನಿಖಾ ಆಯೋಗದ ಅವಧಿ ಆರು ತಿಂಗಳು ವಿಸ್ತರಣೆ

Last Updated 24 ಜುಲೈ 2020, 10:24 IST
ಅಕ್ಷರ ಗಾತ್ರ

ನವದೆಹಲಿ: ಹೈದರಾಬಾದ್‍ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೃತ್ಯದ ನಾಲ್ವರು ಆರೋಪಿಗಳ ಎನ್‍ಕೌಂಟರ್ ಪ್ರಕರಣದ ತನಿಖೆಗೆ ರಚನೆಯಾಗಿದ್ದ ತನಿಖಾ ಆಯೋಗದ ಅವಧಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಆರು ತಿಂಗಳು ವಿಸ್ತರಿಸಿದೆ.

ಎನ್‍ಕೌಂಟರ್ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಎಸ್. ಸಿರ್ಪುರ್ಕರ್ ನೇತೃತ್ವದಲ್ಲಿ ಆಯೋಗ ರಚನೆಯಾಗಿದೆ. ಮುಖ್ಯನ್ಯಾಯಮೂರ್ತಿ ಎಸ್.ಎ.ಬೊಬಡೆ ನೇತೃತ್ವದ ಪೀಠ ಈ ಕುರಿತು ಆದೇಶ ಹೊರಡಿಸಿತು.

ಅವಧಿಯನ್ನು ಆರು ತಿಂಗಳು ವಿಸ್ತರಿಸಲು ಕೋರಿ ಆಯೋಗ ಅರ್ಜಿ ಸಲ್ಲಿಸಿತ್ತು. ಕಳೆದ ವರ್ಷ ಡಿಸೆಂಬರ್ 12ರಂದು ಪ್ರಕರಣದ ತನಿಖೆಗಾಗಿ ಕೋರ್ಟ್ ಮೂವರು ಸದಸ್ಯರ ಆಯೋಗವನ್ನು ರಚಿಸಿತ್ತು.ಬಾಂಬೆ ಹೈಕೋರ್ಟಿನ ಮಾಜಿ ನ್ಯಾಯಮೂರ್ತಿ ರೇಖಾ ಸೊಂಡೂರ್‌ ಬಾಲ್ದೊಟಾ ಮತ್ತು ಸಿಬಿಐ ಮಾಜಿ ನಿರ್ದೇಶಕ ಡಿ.ಆರ್.ಕಾರ್ತಿಕೇಯನ್‍ ಆಯೋಗದ ಇತರ ಸದಸ್ಯರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT