ಶನಿವಾರ, ಜುಲೈ 24, 2021
28 °C

ಭಾರತದಲ್ಲಿ ಗುಣಮುಖ ಆಗುತ್ತಿರುವವರ ಸಂಖ್ಯೆ ಹೆಚ್ಚು: ನರೇಂದ್ರ ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಭಾರತದಲ್ಲಿ ಕೋವಿಡ್‌ ರೋಗದಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯು ಜಗತ್ತಿನ ಇತರ ದೇಶಗಳಿಗೆ ಹೋಲಿಸಿದರೆ ಹೆಚ್ಚಾಗಿದೆ. ಇದಕ್ಕೆ ಇಲ್ಲಿನ ತಳ ಮಟ್ಟದ ಆರೋಗ್ಯ ವ್ಯವಸ್ಥೆಯೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾಮಂಡಳಿಯ ಕಾಯಂ ಅಲ್ಲದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾದ ಒಂದು ತಿಂಗಳ ಬಳಿಕ ಮೊದಲ ಬಾರಿಗೆ ಮೋದಿ ಅವರು ಮಂಡಳಿಯ ಸಭೆಯಲ್ಲಿ ಮಾತನಾಡಿದರು.

‘ಕೋವಿಡ್‌ ವಿರುದ್ಧದ ಹೋರಾಟವನ್ನು ನಾವು ಜನರ ಚಳವಳಿಯ ರೂಪದಲ್ಲಿ ಸ್ವೀಕರಿಸಿದ್ದೇವೆ. ಸರ್ಕಾರ ಮತ್ತು ಸಮಾಜವು ಅದರ ವಿರುದ್ಧ ಹೋರಾಟ ನಡೆಸುತ್ತಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು