ಮಂಗಳವಾರ, ಸೆಪ್ಟೆಂಬರ್ 29, 2020
22 °C

ಬಡವರಿಗೆ ಸಹಾಯ ಮಾಡಲು ಕಚೇರಿಯನ್ನೇ ಕೊರೊನಾ ಆಸ್ಪತ್ರೆನ್ನಾಗಿ ಪರಿವರ್ತಿಸಿದ ಉದ್ಯಮಿ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಸೂರತ್‌: ಕೋವಿಡ್‌ನಿಂದ ಗುಣಮುಖರಾಗಿರುವ ಗುಜರಾತ್ ಮೂಲದ ಉದ್ಯಮಿಯೊಬ್ಬರು ತಮ್ಮ ಕಚೇರಿಯನ್ನು ಕೊರೊನಾ ಆಸ್ಪತ್ರೆಯನ್ನಾಗಿ ಪರಿವರ್ತಿಸಿ ಬಡವರಿಗೆ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ.

ಗುಜರಾತ್‌ನ ಸೂರತ್‌ ನಿವಾಸಿಯಾಗಿರುವ ಖಾದರ್‌ ಶೇಕ್‌ ಎಂಬುವವರು ತಮ್ಮ ಕಚೇರಿಯ ಆವರಣವನ್ನು 85 ಹಾಸಿಗೆಗಳ ಕೊರೊನಾ ವಾರ್ಡ್‌ ಆಗಿ ಪರಿವರ್ತಿಸಿದ್ದಾರೆ. ಆ ಮೂಲಕ ಆರ್ಥಿಕವಾಗಿ ಹಿಂದುಳಿದ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯಲು ಸಹಾಯಹಸ್ತ ಚಾಚಿದ್ದಾರೆ. 

ಉದ್ಯಮಿ ಖಾದರ್‌ ಶೇಕ್‌ ಅವರಿಗೆ ಕಳೆದ ತಿಂಗಳು ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆ ಹಿನ್ನೆಲೆಯಲ್ಲಿ ಸೂರತ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಆಸ್ಪತ್ರೆ ನೀಡಿದ ಬಿಲ್‌ ನೋಡಿ ಗಾಬರಿಗೊಂಡಿದ್ದ ಶೇಕ್‌ ಅವರು ತಮ್ಮ ಕಚೇರಿಯನ್ನೇ ಕೊರೊನಾ ವಾರ್ಡ್‌ ಆಗಿ ಪರಿವರ್ತಿಸಿ ಬಡವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. 

'ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಯ ವೆಚ್ಚವು ದುಬಾರಿಯಾಗಿದೆ. ಅಷ್ಟು ದೊಡ್ಡ ಮೊತ್ತವನ್ನು ಬಡ ಜನರು ಭರಿಸುವುದು ಕಷ್ಟಸಾಧ್ಯ. ಹಾಗಾಗಿ, ಕೋವಿಡ್‌ ವಿರುದ್ಧದ ಹೋರಾಟಕ್ಕೆ ಕೈಜೋಡಿಸಲು ನಿರ್ಧರಿಸಿದೆ' ಎಂದು ಶೇಕ್‌ ತಿಳಿಸಿದ್ದಾರೆ.   

ಸರ್ಕಾರಿ ಅಧಿಕಾರಿಗಳಿಂದ ಪರವಾನಗಿ ಪಡೆದು ಕೊರೊನಾ ವಾರ್ಡ್‌ ಆರಂಭಿಸಿರುವುದಾಗಿ ಶೇಕ್‌ ಹೇಳಿದ್ದಾರೆ.

ಕೊರೊನಾ ಸೋಂಕಿತರ ಜಾತಿ, ಮತ, ಧರ್ಮಗಳನ್ನು ಲೆಕ್ಕಿಸದೇ ಇಲ್ಲಿ ಬರುವ ಪ್ರತಿಯೊಬ್ಬರಿಗೂ ಚಿಕಿತ್ಸೆ ನೀಡಲಾಗುವುದೆಂದು ಶೇಕ್‌ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು