ಮಂಗಳವಾರ, ಆಗಸ್ಟ್ 4, 2020
26 °C

ಕೋವಿಡ್–19 | ಜಮ್ಮು ಕಾಶ್ಮೀರದಲ್ಲಿ ಆಗಸ್ಟ್‌ 5ರ ವರೆಗೆ ಲಾಕ್‌ಡೌನ್ ಮುಂದುವರಿಕೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಶ್ರೀನಗರ: ರಾಜ್ಯದಲ್ಲಿ ಕೋವಿಡ್–19 ಲಾಕ್‌ಡೌನ್ ನಿರ್ಬಂಧಗಳನ್ನು ಆಗಸ್ಟ್‌ 5ರ ವರೆಗೆ ಮುಂದುವರಿಸುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ತಿಳಿಸಿದೆ.
 
ಜುಲೈ 31ರ ವರೆಗೆ ಲಾಕ್‌ಡೌನ್‌ ಮುಂದುವರಿಸಲಾಗುವುದು ಎಂದು ಸರ್ಕಾರವು ತನ್ನ ಹಿಂದಿನ ಆದೇಶದಲ್ಲಿ ತಿಳಿಸಿತ್ತು.
 
ದೇಶದಾದ್ಯಂತ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್‌ಡೌನ್ ನಿರ್ಬಂಧಗಳನ್ನು ವಿಸ್ತರಿಸುವುದು ಸೂಕ್ತ ಎಂದು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.
 
ಜಮ್ಮು ಕಾಶ್ಮೀರದಲ್ಲಿ ಶನಿವಾರ ಹೊಸದಾಗಿ 613 ಸೋಂಕು ಪ್ರಕರಣಗಳು ವರದಿಯಾಗಿದ್ದು, 11 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 20,972ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು