ಬುಧವಾರ, ಡಿಸೆಂಬರ್ 1, 2021
21 °C

ಜೆಎನ್‌ಯು: ಕನ್ನಡ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿ ಅಧ್ಯಯನ ಪೀಠದ ಪ್ರಾಧ್ಯಾಪಕ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರಬೇಕು. ಭಾಷೆ, ಸಾಹಿತ್ಯ ಮತ್ತು  ಸಂಸ್ಕೃತಿಯ ಬಗ್ಗೆ ಆಳವಾದ ಜ್ಞಾನ ಹೊಂದಿರಬೇಕು (ಸಂಬಂಧಪಟ್ಟ ಕ್ಷೇತ್ರದಲ್ಲಿ ಪಿಎಚ್‌.ಡಿ ಹೊಂದಿರಬೇಕು), ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದ ಇತರ ವಿಭಾಗಗಳ ಜತೆಗೆ ಸಂವಹನ ನಡೆಸಲು ಸಾಧ್ಯವಾಗುವಂತೆ ಇಂಗ್ಲಿಷ್‌ ಅಥವಾ ಹಿಂದಿ ಭಾಷೆಯ ಜ್ಞಾನ ಹೊಂದಿರಬೇಕು, ಹೆಸರಾಂತ ಪ್ರಕಾಶನ ಸಂಸ್ಥೆಯ ಮೂಲಕ ಕೃತಿಗಳನ್ನು ಪ್ರಕಟಿಸಿರಬೇಕು. ಸಂಶೋಧಕರಿಗೆ ಮಾರ್ಗದರ್ಶನ ನೀಡಿದ ಅನುಭವ ಹೊಂದಿರಬೇಕು, 65 ವರ್ಷಕ್ಕೂ ಮೇಲ್ಪಟ್ಟವರ ಅರ್ಜಿಯನ್ನು ಪರಿಗಣಿಸುವುದಿಲ್ಲ. ಆಸಕ್ತರು rectorii@mail.jnu.ac.in ಗೆ ಸ್ವವಿವರಗಳನ್ನು ಕಳುಹಿಸಬಹುದು ಎಂದು ವಿಶ್ವವಿದ್ಯಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು