ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಒಂದೇ ದಿನ 49,931 ಪ್ರಕರಣ

Last Updated 27 ಜುಲೈ 2020, 18:44 IST
ಅಕ್ಷರ ಗಾತ್ರ

ನವದೆಹಲಿ:ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲೇ ಸಾಗಿದೆ.

ಸೋಮವಾರ ಬೆಳಿಗ್ಗೆ 8 ಗಂಟೆವರೆಗಿನ 24 ತಾಸುಗಳಲ್ಲಿ ಒಟ್ಟು 49,931 ಮಂದಿಗೆ ಕೋವಿಡ್‌–19 ದೃಢಪಟ್ಟಿದೆ. ಇದು ಒಂದು ದಿನದಲ್ಲಿ ಈವರೆಗಿನ ದಾಖಲೆಯಾಗಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯು 14.35 ಲಕ್ಷಕ್ಕೆ ಹೆಚ್ಚಿದೆ. ಗುಣಮುಖ ಪ್ರಮಾಣವು ಶೇಕಡ 63.92ಕ್ಕೆ ಏರಿದ್ದು, ಇದುವರೆಗೂ ಒಟ್ಟು 9.17 ಲಕ್ಷ ಮಂದಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.ಒಟ್ಟು 4.85 ಲಕ್ಷ ಸಕ್ರಿಯ ಪ್ರಕರಣಗಳಿವೆ.ದೇಶದಲ್ಲಿ ಸತತ ಐದನೇ ದಿನ 45 ಸಾವಿರಕ್ಕೂ ಅಧಿಕ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳ ಪ್ರಕಾರ ಸೋಮವಾರ ಬೆಳಗಿನ ಜಾವದವರೆಗೆ ಒಟ್ಟು 708 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಮೃತರ ಒಟ್ಟು ಸಂಖ್ಯೆಯು 32,771ಕ್ಕೆ ತಲುಪಿದೆ.

ಮಹಾರಾಷ್ಟ್ರದಲ್ಲಿ ಕೋವಿಡ್‌ ಪೀಡಿತರ ಸಂಖ್ಯೆಯು ನಾಲ್ಕು ಲಕ್ಷದ ಗಡಿಯತ್ತ ಸಾಗಿದೆ. ತಮಿಳುನಾಡಿನಲ್ಲೂ ಹೆಚ್ಚು ಮಂದಿ ಕೋವಿಡ್‌ನಿಂದ ಬಾಧಿತರಾಗಿದ್ದಾರೆ.

‘ಈವರೆಗೆ 1.68 ಕೋಟಿ ಮಾದರಿಗಳನ್ನು ಸಂಗ್ರಹಿಸಿ ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ. ಕೇವಲ 24 ಗಂಟೆಗಳಲ್ಲಿ 5,15,472 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇದು ಒಂದು ದಿನದಲ್ಲಿ ಈವರೆಗಿನ ದಾಖಲೆಯಾಗಿದೆ’ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್‌) ತಿಳಿಸಿದೆ.

ಅತಿ ಹೆಚ್ಚು ಸೋಂಕಿತರನ್ನು ಹೊಂದಿರುವ ಮಹಾರಾಷ್ಟ್ರದಲ್ಲಿ3,75,799 ಪ್ರಕರಣಗಳು ವರದಿಯಾಗಿದ್ದು,2,13,238 ಮಂದಿ ಗುಣಮುಖರಾಗಿದ್ದಾರೆ.13,656 ಮೃತಪಟ್ಟಿದ್ದಾರೆ. ತಮಿಳುನಾಡಿನಲ್ಲಿ2,13,723 ಜನರಿಗೆಸೋಂಕು ದೃಢಪಟ್ಟಿದ್ದು, ಇದುವರೆಗೆ3,494 ಮಂದಿ ಸಾವಿಗೀಡಾಗಿದ್ದಾರೆ.

ರಾಜಧಾನಿ ದೆಹಲಿಯಲ್ಲಿ1,30,606 ಮಂದಿಗೆಸೋಂಕು ತಗುಲಿದೆ. ಇದರಲ್ಲಿ1,14,875 ಸೋಂಕಿತರು ಗುಣಮುಖರಾಗಿದ್ದಾರೆ. 3827 ಮಂದಿ ಮೃತಪಟ್ಟಿದ್ದು,11,904 ಸಕ್ರಿಯ ಪ್ರಕರಣಗಳಿವೆ.

ಕರ್ನಾಟಕದಲ್ಲಿ ಭಾನುವಾರ ಸಂಜೆ 5 ಗಂಟೆ ವರೆಗೆ ಒಟ್ಟು96,141 ಜನರಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ 35,868 ಸೋಂಕಿತರು ಗುಣಮುಖರಾಗಿದ್ದು, ಇನ್ನೂ 58,417 ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ. 1,878 ಜನರು ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT