ಶನಿವಾರ, ಜುಲೈ 24, 2021
27 °C
ವನ್ಯಜೀವಿಗಳ ಮೇಲೆ ದೌರ್ಜನ್ಯಕ್ಕೆ ತಡೆ

ಕೇರಳ ಆನೆ ಸಾವು ಪ್ರಕರಣ: ಕೇಂದ್ರ, 13 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವನ್ಯ ಪ್ರಾಣಿಗಳ ಮೇಲೆ ದೌರ್ಜನ್ಯ ನಡೆಯುತ್ತಿರುವುದನ್ನು ತಡೆಗಟ್ಟುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್‌, ಈ ಸಂಬಂಧ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರ ಹಾಗೂ 13 ರಾಜ್ಯಗಳಿಗೆ ಶುಕ್ರವಾರ ನೋಟಿಸ್‌ ನೀಡಿದೆ.

ವಕೀಲ ಶುಭಂ ಅವಸ್ಥಿ ಎಂಬುವವರು ಅರ್ಜಿ ಸಲ್ಲಿಸಿದ್ದಾರೆ. ಕೇರಳದಲ್ಲಿ ಕೆಲವರು ನೀಡಿದ್ದ ಸ್ಫೋಟಕ ತುಂಬಿದ್ದ ಪೈನಾಪಲ್‌ ತಿಂದು ಗರ್ಭಿಣಿ ಆನೆಯೊಂದು ಸಾವನ್ನಪ್ಪಿದ ಘಟನೆ ಹಿನ್ನೆಲೆಯಲ್ಲಿ ವಕೀಲ ಅವಸ್ಥಿ ಈ ಅರ್ಜಿ ಸಲ್ಲಿಸಿದ್ದಾರೆ. 

ಮುಖ್ಯನ್ಯಾಯಮೂರ್ತಿ ಎಸ್‌.ಎ.ಬೊಬಡೆ, ನ್ಯಾಯಮೂರ್ತಿಗಳಾದ ಆರ್‌.ಸುಭಾಷ್‌ ರೆಡ್ಡಿ, ಎಸ್‌.ಎ.ಬೋಪಣ್ಣ ಅವರಿರುವ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದೆ. 

ವನ್ಯಜೀವಿಗಳಿಗೆ ಸಂಬಂಧಿಸಿದಂತೆ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ರೂಪಿಸಬೇಕು. ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದರು. 

ವನ್ಯಜೀವಿಗಳನ್ನು ಓಡಿಸಲು ದೌರ್ಜನ್ಯ ಎಸಗುವುದು, ಬಡಿಗೆ, ಬಲೆ ಅಥವಾ ಸ್ಫೋಟಕಗಳನ್ನು ಬಳಸುವುದು ಕಾನೂನುಬಾಹಿರ ಎಂದು ಘೋಷಿಸುವಂತೆಯೂ ಅವರು ಮನವಿ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು