ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಭಾಸ್ಕರ್‌ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಕೇರಳ ಸರ್ಕಾರ

Last Updated 30 ಜುಲೈ 2020, 3:29 IST
ಅಕ್ಷರ ಗಾತ್ರ

ತಿರುವನಂತಪುರ: ಸಂಗೀತ ನಿರ್ದೇಶಕ ಬಾಲಭಾಸ್ಕರ್‌ ಸಾವು ಪ್ರಕರಣದ ತನಿಖೆಯನ್ನು ಕೇರಳ ಸರ್ಕಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಿದೆ.

2018ರ ಸೆ.25ರಂದು ಬಾಲಭಾಸ್ಕರ್‌ ಅವರ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ತಿರುವನಂತಪುರದ ಹೊರವಲಯದಲ್ಲಿ ಮರಕ್ಕೆ ಡಿಕ್ಕಿ ಹೊಡೆದಿತ್ತು. ಬಾಲಭಾಸ್ಕರ್‌ ಹಾಗೂ ಅವರ 2 ವರ್ಷದ ಪುತ್ರಿ ತೇಜಸ್ವಿನಿ ಸಾವನ್ನಪ್ಪಿದ್ದರು.

ಸದ್ಯ ಕೇರಳದಲ್ಲಿ ಚಿನ್ನ ಕಳ್ಳಸಾಗಾಟ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ‘ವಿದೇಶಗಳಲ್ಲಿ ಕಾರ್ಯಕ್ರಮ ನೀಡಲು ಹೋದಾಗ, ಬಾಲಭಾಸ್ಕರ್‌ಗೆ ಗೊತ್ತಿಲ್ಲದೆಯೇ ಅವರನ್ನು ಗುರಾಣಿಯಾಗಿ ಬಳಸಿಕೊಂಡು ಅವರ ಸ್ನೇಹಿತರು ಕಳ್ಳಸಾಗಾಣಿಕೆ ಮಾಡಿರುವ ಸಾಧ್ಯತೆ ಇದೆ’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT