ಗುರುವಾರ , ಆಗಸ್ಟ್ 5, 2021
23 °C

ವೈಝಾಗ್‌ ಅನಿಲ ಸೋರಿಕೆ: ಎಲ್‌ಜಿ ಪಾಲಿಮರ್ಸ್‌ ಸಿಇಒ ಸೇರಿ 10 ಜನರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ವಿಶಾಖಪಟ್ಟಣ: ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ (ವೈಝಾಗ್‌) ಅನಿಲ ಸೋರಿಕೆಯಾಗಿ 12 ಜನ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್‌ಜಿ ಪಾಲಿಮರ್ಸ್‌ ಕಂಪನಿಯ ಸಿಇಒ ಹಾಗೂ ಇಬ್ಬರು ನಿರ್ದೇಶಕರು ಸೇರಿದಂತೆ 10 ಜನರನ್ನು ಮಂಗಳವಾರ ತಡ ರಾತ್ರಿ ಪೊಲೀಸರು ಬಂಧಿಸಿದ್ದಾರೆ.

ಅನಿಲ ಸೋರಿಕೆ ಘಟನೆ ಬಗ್ಗೆ ಆಂಧ್ರಪ್ರದೇಶ ಸರ್ಕಾರ ಉನ್ನತಮಟ್ಟದ ತನಿಖೆ ಸಮಿತಿಯನ್ನು ರಚನೆ ಮಾಡಿತ್ತು. ಈ ಸಮಿತಿ ಮುಖ್ಯಮಂತ್ರಿ ಜಗನ್‌ಮೋಹನ್‌ ರೆಡ್ಡಿ ಅವರಿಗೆ ವರದಿ ಸಲ್ಲಿಸಿದ ಮರು ದಿನವೇ ಪೊಲೀಸರು 10 ಜನರನ್ನು ಬಂಧಿಸಿದ್ದಾರೆ. ಘಟನೆ ನಡೆದು 2 ತಿಂಗಳ ಬಳಿಕ ಆರೋಪಿಗಳ ಬಂಧನವಾಗಿದೆ.

ಎಲ್‌ಜಿ ಪಾಲಿಮರ್ಸ್‌ನಲ್ಲಿ ಕಳಪೆ ಸುರಕ್ಷತಾ ಕ್ರಮಗಳು ಹಾಗೂ ನಿರ್ವಹಣೆ ಕೊರತೆಯೇ ಅನಿಲ ಸೋರಿಕೆಗೆ ಕಾರಣ ಎಂದು ಉನ್ನತಮಟ್ಟದ ತನಿಖಾ ವರದಿಯಲ್ಲಿ ಹೇಳಲಾಗಿದೆ ಎಂದು ವಿಶಾಖಪಟ್ಟಣ ಪೊಲೀಸ್‌ ಮುಖ್ಯಸ್ಥರಾದ ಆರ್‌,ಕೆ. ಮೀನಾ ತಿಳಿಸಿದ್ದಾರೆ.

ಮೇ 7ರಂದು ಎಲ್‌ಜಿ ಪಾಲಿಮರ್ಸ್‌ ವಿರುದ್ಧ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಅನಿಲ ಸೋರಿಕೆಯಿಂದಾಗಿ 12 ಜನರು ಮೃತಪಟ್ಟು 585 ಜನರು ಅನಾರೋಗ್ಯಕ್ಕೆ ತುತ್ತಾಗಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು