ಬುಧವಾರ, ಆಗಸ್ಟ್ 4, 2021
20 °C
ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿಯಿಂದ ₹ 4ಲಕ್ಷ ಪರಿಹಾರ ಘೋಷಣೆ

ಬಿಹಾರ: ಸಿಡಿಲಿನಿಂದ 10 ಮಂದಿ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

ಪಟ್ನಾ: ಬಿಹಾರದಲ್ಲಿ ಭಾನುವಾರ ಭಾರಿ ಮಳೆಯಾಗಿದ್ದು, ಸಿಡಿಲಿನಿಂದಾಗಿ ಹತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಡಿಲಿನಿಂದ ಮೃತಪಟ್ಟವರ ಬಗ್ಗೆ ದುಃಖ ವ್ಯಕ್ತಪಡಿಸಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಮೃತರ ಕುಟುಂಬಕ್ಕೆ ತಲಾ ₹ 4ಲಕ್ಷ ಪರಿಹಾರ  ಘೋಷಿಸಿದ್ದಾರೆ.

ಪುರ್ನಿಯಾದಲ್ಲಿ ಮೂವರು, ಬೇಗುಸುರಾಯ್‌ನಲ್ಲಿ ಇಬ್ಬರು, ಪಟ್ನಾ, ಸಹರ್ಸಾ, ಪೂರ್ವ ಚಂಪಾರಣ್, ಮಾಧೇಪುರ್ ಮತ್ತು ದರ್ಭಾಂಗ್ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಬಿಹಾರದಲ್ಲಿ ಮೂರು ವಾರಗಳಲ್ಲಿ ಸಿಡಿಲಿನಿಂದಾಗಿ 160ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು