ಬುಧವಾರ, ಜೂನ್ 16, 2021
22 °C
ಸಾವಿನ ಸಂಖ್ಯೆ 86ಕ್ಕೆ ಏರಿಕೆ

ಕಳ್ಳಭಟ್ಟಿ ದುರಂತ: ಮೃತರ ಕುಟುಂಬಕ್ಕೆ ₹ 2 ಲಕ್ಷ ಪರಿಹಾರ ಘೋಷಿಸಿದ ಪಂಜಾಬ್‌ ಸಿಎಂ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಚಂಡೀಗಡ: ಪಂಜಾಬ್‌ನಲ್ಲಿ ನಡೆದ ಕಳ್ಳಭಟ್ಟಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 86ಕ್ಕೆ ಏರಿಕೆಯಾಗಿದ್ದು, ಮೃತರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.

ತರ್ನ್‌ ಟರಾನ್‌ ಜಿಲ್ಲೆಯೊಂದರಲ್ಲಿ ಮೃತಪಟ್ಟವರ ಸಂಖ್ಯೆ 63ಕ್ಕೆ ತಲುಪಿದೆ ಎಂದು ಜಿಲ್ಲಾಧಿಕಾರಿ ಕುಲ್ವಂತ್‌ ಸಿಂಗ್‌ ತಿಳಿಸಿದ್ದಾರೆ. 

ಅಮೃತಸರದಲ್ಲಿ 12 ಮತ್ತು ಗುರುದಾಸ್‌ಪುರದ ಬಟಾಲದಲ್ಲಿ ಈವರೆಗೆ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ.

ಪ್ರಕರಣ ಸಂಬಂಧ 7 ಅಬಕಾರಿ ಮತ್ತು ತೆರಿಗೆ ಅಧಿಕಾರಿಗಳು, 2 ಡಿಎಸ್‌ಪಿ, 4 ಎಸ್ಎಚ್‌ಒ ಪೊಲೀಸರನ್ನು ಅಮಾನತುಗೊಳಿಸಿ ಸಿಎಂ ಅಮರಿಂದರ್‌ ಸಿಂಗ್‌ ಆದೇಶಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು