ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡು: ಆಗಸ್ಟ್‌ 31ರವರೆಗೆ ಲಾಕ್‌ಡೌನ್‌ ವಿಸ್ತರಿಸಿದ ಸರ್ಕಾರ

Last Updated 30 ಜುಲೈ 2020, 10:06 IST
ಅಕ್ಷರ ಗಾತ್ರ

ಚೆನ್ನೈ: ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್-19 ದೃಢಪಟ್ಟ ಪ್ರಕರಣಗಳು ಜಾಸ್ತಿಯಾಗುತ್ತಲೇ ಇರುವ ಬೆನ್ನಲ್ಲೇ ಕೊರೊನಾ ಸೋಂಕು ಹರಡುವುದನ್ನು ತಡೆಯುವ ಭಾಗವಾಗಿ ಆಗಸ್ಟ್ 31 ರವರೆಗೆ ತಮಿಳುನಾಡಿನಲ್ಲಿ ಲಾಕ್‌ಡೌನ್ ಅನ್ನು ವಿಸ್ತರಿಸಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿದೆ.

ಎಲ್ಲಾ ಭಾನುವಾರದಂದು (ಆಗಸ್ಟ್ 2, 9, 16, 23 ಮತ್ತು 30) ಸಂಪೂರ್ಣ ಲಾಕ್‌ಡೌನ್‌ ಆಗಲಿದೆ ಎಂದು ತಮಿಳುನಾಡು ಸರ್ಕಾರ ಪ್ರಕರಣೆಯನ್ನು ಬಿಡುಗಡೆ ಮಾಡಿದೆ.

ನಿನ್ನೆಯಷ್ಟೇ ಮಾತನಾಡಿದ್ದ ತಮಿಳುನಾಡು ಮುಖ್ಯಮಂತ್ರಿ ಇ. ಪಳನಿಸ್ವಾಮಿ, ನಗರದಲ್ಲಿ ಕೋವಿಡ್-19 ಪ್ರಕರಣಗಳನ್ನು ಪರೀಕ್ಷಿಸಲು ಚೆನ್ನೈನಲ್ಲಿ 500ಕ್ಕೂ ಹೆಚ್ಚು ವೈದ್ಯಕೀಯ ಶಿಬಿರಗಳನ್ನು ಸ್ಥಾಪಿಸಲಾಗಿದೆ ಮತ್ತು 1,45,000 ಜನರಿಗೆ ಪ್ರಯೋಜನವಾಗಿದೆ ಎಂದು ಹೇಳಿದ್ದಾರೆ.

ಚೆನ್ನೈವೊಂದರಲ್ಲೇ 500ಕ್ಕೂ ಹೆಚ್ಚು ಪರೀಕ್ಷಾ ಕೇಂದ್ರಗಳು ಕಾರ್ಯಾಚರಿಸುತ್ತಿದ್ದು, 1,45,000 ಜನರು ಇದರ ಫಲಾನುಭವಿಗಳಾಗಿದ್ದಾರೆ ಎಂದು ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ಮಾಹಿತಿ ನೀಡಿದರು.

ಚೆನ್ನೈ ಮತ್ತು ರಾಜ್ಯದ ಹಲವಾರು ಭಾಗಗಳಲ್ಲಿನ ಮೊಬೈಲ್ ಆಸ್ಪತ್ರೆಗಳ ಕುರಿತು ಮಾತನಾಡಿದ ಅವರು, 'ಚೆನ್ನೈನಲ್ಲಿ 70 ಮೊಬೈಲ್ ಆಸ್ಪತ್ರೆಗಳನ್ನು ಪ್ರಾರಂಭಿಸಲಾಗಿದೆ. ಈ ಮಧ್ಯೆ ರಾಜ್ಯದ ಇತರ ಭಾಗಗಳಲ್ಲಿ ಒಟ್ಟಾರೆ 1,126 ಮೊಬೈಲ್ ಆಸ್ಪತ್ರೆಗಳಿವೆ. ಚೆನ್ನೈನಲ್ಲಿ ಮನೆಮನೆಗೆ ತೆರಳಿ ಕೋವಿಡ್-19 ಪರೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಬುಧವಾರ ಬಿಡುಗಡೆಯಾದ ವರದಿಯ ಪ್ರಕಾರ ತಮಿಳುನಾಡಿನಲ್ಲಿ 6,426 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದರೆ, 82 ಜನರು ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಇಲಾಖೆಯು ತಿಳಿಸಿದೆ.

ಒಟ್ಟಾರೆ ರಾಜ್ಯದಲ್ಲಿ 57,490 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರ ಸಂಖ್ಯೆ 2,34,114ಕ್ಕೆ ಏರಿಕೆಯಾಗಿದೆ.

ಈವರೆಗೆ 1,72,883 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟಾರೆ 3,741 ಜನರು ಕೋವಿಡ್‌ನಿಂದಾಗಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT