ಶನಿವಾರ, ಜುಲೈ 31, 2021
25 °C

ಸ್ಥಳೀಯ ಲಾಕ್‌ಡೌನ್‌: ರಾಜ್ಯಗಳ ನಿರ್ಧಾರ ಎಂದ ಪ್ರಧಾನಿ ನರೇಂದ್ರ ಮೋದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ದೇಶದಲ್ಲಿ ತೀವ್ರವಾಗಿ ಹರಡುತ್ತಿರುವ ಕೊರೊನಾ ಸೋಂಕು ತಡೆಗಟ್ಟಲು ಹಲವು ರಾಜ್ಯ ಸರ್ಕಾರಗಳು ಸ್ಥಳೀಯವಾಗಿ ಲಾಕ್‌ಡೌನ್‌ಅನ್ನು ಮರು ಜಾರಿಗೊಳಿಸಲು ನಿರ್ಧರಿಸಿವೆ.

ಬೆಂಗಳೂರಿನಲ್ಲಿ ಒಂದು ವಾರದ ಲಾಕ್‌ಡೌನ್‌ ಘೋಷಣೆಯಾದ ಬೆನ್ನಹಿಂದೆಯೇ ಮಹಾರಾಷ್ಟ್ರದ ಪುಣೆ, ಪಿಂಪ್ರಿ–ಚಿಂಚವಾಡ ಹಾಗೂ ಮುಂಬೈ ಮಹಾನಗರದ ಕೆಲವು ಪ್ರದೇಶಗಳಲ್ಲಿಯೂ ಜುಲೈ 13ರಿಂದ ಲಾಕ್‌ಡೌನ್‌ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಅಸ್ಸಾಂ, ಮೇಘಾಲಯ ಮತ್ತು ಅರುಣಾಚಲ ಪ್ರದೇಶಗಳ ಬಹುತೇಕ ಭಾಗಗಳಲ್ಲಿ ಜನ ಮನೆಯಿಂದ ಹೊರಬಾರದಂತೆ ನಿರ್ಬಂಧ ವಿಧಿಸಲಾಗಿದೆ.

ಅಧಿಕ ಪ್ರಕರಣ:ದೇಶದಲ್ಲಿ ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ 29,113 ಹೊಸ ಪ್ರಕರಣಗಳು ವರದಿ
ಯಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ನಡೆಸಿ, ದೇಶದ ಸ್ಥಿತಿಗತಿಯನ್ನು ಪರಾಮರ್ಶಿಸಿದರು. ‘ಪ್ರತಿಕ್ಷಣದ ಬೆಳವಣಿಗೆಗಳ ಮೇಲೆ ನಿಗಾ ಇಟ್ಟು, ಯಾವುದೇ ಲೋಪಗಳು ಆಗದಂತೆ ಪರಿಸ್ಥಿತಿಯನ್ನು ಸೂಕ್ತವಾಗಿ ನಿರ್ವಹಣೆ ಮಾಡಬೇಕು’ ಎಂದು ಸೂಚನೆ ನೀಡಿದರು.

ದೆಹಲಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಹಾಗೂ ಸ್ಥಳೀಯ ಆಡಳಿತ ಸೋಂಕಿನ ನಿಯಂತ್ರಣಕ್ಕಾಗಿ ನಡೆಸಿರುವ ಪ್ರಯತ್ನಗಳಿಗೆ ಮೆಚ್ಚುಗೆಯನ್ನೂ ವ್ಯಕ್ತಪಡಿಸಿದರು.

ಔಷಧಿಗೆ ಒಪ್ಪಿಗೆ: ಈ ಮಧ್ಯೆ ಸೋರಿಯಾಸಿಸ್‌ ಚಿಕಿತ್ಸೆಗೆ ನೀಡಲಾಗುವ ಇಟೋಲಿಜುಮಾಬ್‌ ಔಷಧಿಯನ್ನು ಕೋವಿಡ್‌ ರೋಗಿಗಳಿಗೆ ತುರ್ತು ಸಂದರ್ಭದಲ್ಲಿ ನಿಯಂತ್ರಿತವಾಗಿ ನೀಡಲು ಡ್ರಗ್‌ ಕಂಟ್ರೋಲರ್‌ ಜನರಲ್‌ ಆಫ್‌ ಇಂಡಿಯಾದಿಂದ ಅನುಮತಿ ದೊರೆತಿದೆ.

‘ಆಸ್ಪತ್ರೆಗಳಲ್ಲಿ ಹಾಗೂ ವೈದ್ಯರ ನಿಗಾದಲ್ಲಿ ಮಾತ್ರ ಈ ಔಷಧಿಯನ್ನು ರೋಗಿಗಳಿಗೆ ನೀಡಬೇಕು ಮತ್ತು ರೋಗಿಗಳಿಗೆ ಔಷಧಿಯಿಂದ ಎದುರಾಗಬಹುದಾದ ಅಪಾಯಗಳ ಕುರಿತೂ ಮಾಹಿತಿ ನೀಡಿರಬೇಕು’ ಎಂದೂ ಅದು ನಿರ್ದೇಶಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು