ಶುಕ್ರವಾರ, ಆಗಸ್ಟ್ 7, 2020
22 °C

ಮಧ್ಯಪ್ರದೇಶ ಸಂಪುಟ ವಿಸ್ತರಣೆಗೆ ಅಸಮಾಧಾನ: ಶಾಸಕರಿಂದ ಸಿ.ಎಂಗೆ ಪತ್ರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: ಸಂಪುಟ ವಿಸ್ತರಣೆ ಬಳಿಕ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದಿದ್ದು, ಆಡಳಿತಾರೂಢ ಪಕ್ಷದ ಶಾಸಕ ಅಜಯ್‌ ವಿಷ್ಣೋಯಿ ಈ ಸಂಬಂಧ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದಿದ್ದಾರೆ. 

‘ನನಗೆ ನಿಮ್ಮ ಪರಿಸ್ಥಿತಿ ಅರ್ಥವಾಗುತ್ತದೆ. ಆದರೆ, ಜನರಿಗೆ ಅದು ತಿಳಿಯುವುದಿಲ್ಲ. ನಿಮ್ಮ ನಿರ್ಧಾರದಿಂದ ಜಬಲ್‌ಪುರ ಮತ್ತು ರೇವಾ ಕ್ಷೇತ್ರದ ಜನರು ಅಸಮಾಧಾನಗೊಂಡಿದ್ದಾರೆ. ಈ ಎರಡು ಕ್ಷೇತ್ರಗಳ ಜನರನ್ನು ಸಮಾಧಾನ ಮಾಡುವ ಉಸ್ತುವಾರಿ ವಹಿಸಿಕೊಳ್ಳಬೇಕು ಎಂದು ನಿಮ್ಮನ್ನು ವಿನಂತಿಸುತ್ತೇನೆ. ನೀವು ನನ್ನ ಕೋರಿಕೆಯನ್ನು ಪರಿಗಣಿಸುತ್ತೀರಿ ಎಂದು ಭಾವಿಸುತ್ತೇನೆ’ ಎಂದು ಹೇಳಿದ್ದಾರೆ. 

ಕಾಂಗ್ರೆಸ್‌ನಿಂದ ಪಕ್ಷಾಂತರಗೊಂಡು ಬಿಜೆಪಿ ಸಂಸದಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ನಿಷ್ಠರಾಗಿರುವ ಶಾಸಕರಿಗೂ ಸಂಪುಟದಲ್ಲಿ ಅವಕಾಶ ದೊರಕಿರುವ ಕುರಿತು ಶಾಸಕರು ಅಸಮಾಧಾನ ಹೊರಹಾಕಿದ್ದಾರೆ. 

ವಿಷ್ಣೋಯಿ‌ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪ್ರಸ್ತುತ ಜಬಲ್‌ಪುರದ ಪಟಾನ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು