ಭಾನುವಾರ, ಸೆಪ್ಟೆಂಬರ್ 26, 2021
21 °C

ಔರಂಗಬಾದ್: ಸಂಜೆ 7 ರಿಂದ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಔರಂಗಬಾದ್‌‌: ಕೊರೊನಾ ಸೋಂಕು ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನಗತ್ಯ ಓಡಾಟ ತಡೆಯಲು ಇಲ್ಲಿ ಸಂಜೆ 7 ರಿಂದ ಬೆಳಿಗ್ಗೆ 5 ಗಂಟೆವರೆಗೆ ‘ಕರ್ಫ್ಯೂ’ ವಿಧಿಸಿ ನಗರ ಪೊಲೀಸ್ ಆಯುಕ್ತ ಶುಕ್ರವಾರ ಆದೇಶಿಸಿದ್ದಾರೆ. 

ವೈದ್ಯಕೀಯ ಸೇವೆಯಲ್ಲಿ ನಿರತ ವಾಹನ, ಪಾಸ್‌ ಹೊಂದಿರುವ ಕೈಗಾರಿಕ ವಾಹನಗಳಿಗೆ ಮಾತ್ರ ಈ ವೇಳೆ ಸಂಚರಿಸಲು ಅನುಮತಿ ನೀಡಲಾಗುತ್ತದೆ. ಇದೇ ತಿಂಗಳ 15 ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. 2 ಕಿ.ಮೀ ವ್ಯಾಪ್ತಿಯ ಅಂಗಡಿಗಳಿಂದ ಅಗತ್ಯ ವಸ್ತುಗಳನ್ನು ಖರೀದಿಸಿ ಎಂದು ಪೊಲೀಸ್‌ ಇಲಾಖೆ ಸಲಹೆ ನೀಡಿದೆ. 

ಔರಂಗಬಾದ್‌ನಲ್ಲಿ ಶುಕ್ರವಾರ ಒಂದೇ ದಿನ 200 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಒಟ್ಟು 6,243 ಮಂದಿಗೆ ಸೋಂಕು ತಗುಲಿದೆ. ಸದ್ಯ 2,995 ಸಕ್ರಿಯ ಪ್ರಕರಣವಿದ್ದು, 2,969 ಮಂದಿ ಗುಣಮುಖರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು