ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಐವರು ಜಲಪಾತದಲ್ಲಿ ಮುಳುಗಿ ಸಾವು

Last Updated 3 ಜುಲೈ 2020, 9:53 IST
ಅಕ್ಷರ ಗಾತ್ರ

ಪಾಲ್ಗರ್‌‌:ಮಹಾರಾಷ್ಟ್ರದ ಪಾಲ್ಗರ್ ಜಿಲ್ಲೆಯ ಕಲ್ಮಂಡ್ವಿ ಜಲಪಾತದ ಬಳಿಸೆಲ್ಫಿ ತೆಗೆದುಕೊಳ್ಳಲು ಹೋದ ಐವರು ಜಲಸಮಾಧಿ ಆಗಿದ್ದಾರೆ. ಇದು ಗುರುವಾರ ಮಧ್ಯಾಹ್ನ ನಡೆದಿದೆ.

13 ಜನರ ಗುಂಪಿನಲ್ಲಿದ್ದ ಇಬ್ಬರುಜಲಪಾತದ ಬಳಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಆಯತಪ್ಪಿದ್ದಾರೆ. ಅವರನ್ನು ರಕ್ಷಿಸಲು ನೀರಿಗೆ ಧುಮುಕಿದ ಮೂವರೂ ಸೇರಿ ಒಟ್ಟು ಐವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆಯ ಸಿಬ್ಬಂದಿಗಳು ಶವಗಳನ್ನು ಹೊರತೆಗೆಯುವಲ್ಲಿ ಸಫಲರಾಗಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT