ಲಖನೌ: ರಾಜಸ್ಥಾನದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕೆಂದು ಬಿಎಸ್ಪಿ ಅಧ್ಯಕ್ಷೆ ಮಾಯಾವತಿ ಒತ್ತಾಯಿಸಿದ್ದಾರೆ.

ಬಿಜೆಪಿಯು ರಾಜ್ಯದಲ್ಲಿ ಶಾಸಕರ ಖರೀದಿ ಮಾಡುತ್ತಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿಕೆ ನೀಡಿದ್ದರು. ಆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಯಾವತಿ ಕಾಂಗ್ರೆಸ್ ಮುಖಂಡರು ರಾಜಸ್ಥಾನದ ಬಿಎಸ್ಪಿ ಶಾಸಕರೊಂದಿಗೆ ಇದನ್ನೇ ಮಾಡಿದ್ದರು ಎಂದು ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ರಾಜಕೀಯ ಬಿಕ್ಕಟ್ಟು ತಲೆದೋರಿರುವ ಹಿನ್ನೆಲೆಯಲ್ಲಿ ಟ್ವೀಟ್ ಮಾಡಿರುವ ಅವರು, 'ರಾಜಸ್ಥಾನ ಮುಖ್ಯಮಂತ್ರಿ ಕಾನೂನು ಉಲ್ಲಂಘಿಸಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಈ ಮೊದಲು ಅವರು ಬಹುಜನ ಸಮಾಜವಾದಿ ಪಕ್ಷದ ಶಾಸಕರನ್ನು ಕಾಂಗ್ರೆಸ್ಗೆ ಸೇರುವಂತೆ ಮಾಡಿದ್ದರು. ಈಗ ಮತ್ತೆ ಅಕ್ರಮವಾಗಿ ಫೋನ್ ಕರೆಗಳನ್ನು ಕದ್ದಾಲಿಸುವ ಮೂಲಕ ಅವರು ಕಾನೂನು ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿಗಳ ಆಡಳಿತ ಹೇರಬೇಕು' ಎಂದು ಮಾಯಾವತಿ ತಿಳಿಸಿದ್ದಾರೆ.

'ರಾಜಸ್ಥಾನದಲ್ಲಿ ಮುಂದುವರೆದಿರುವ ರಾಜಕೀಯ ಗೊಂದಲ ಮತ್ತು ಅಸ್ಥಿರತೆಗಳ ಬಗ್ಗೆ ರಾಜ್ಯಪಾಲರು ಸಂಪೂರ್ಣ ಮಾಹಿತಿ ಪಡೆದುಕೊಳ್ಳಬೇಕು. ಆ ನಂತರ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಲು ಶಿಫಾರಸು ಮಾಡಿ, ಪ್ರಜಾಪ್ರಭುತ್ವ ಉಳಿಸಬೇಕು' ಎಂದು ಮಾಯಾವತಿ ಅವರು ಮತ್ತೊಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.