ಬುಧವಾರ, ಆಗಸ್ಟ್ 4, 2021
21 °C

ಕೇರಳ | 30 ಕೆ.ಜಿ ಚಿನ್ನ ಅಕ್ರಮ ಸಾಗಣೆ, ತನಿಖೆಯ ಹೊಣೆ ಎನ್‌ಐಎಗೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೇರಳದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡಿರುವ ಪ್ರಕರಣದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. 

ಪ್ರಕರಣದ ಪರಿಣಾಮಕಾರಿ ತನಿಖೆಗೆ ಮಧ್ಯಸ್ಥಿಕೆ ವಹಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪತ್ರ ಬರೆದ ಮರುದಿನವೇ ಈ ಬೆಳವಣಿಗೆ ನಡೆದಿದೆ. 

‘ಸಂಘಟಿತ ಕಳ್ಳಸಾಗಣೆ ಕಾರ್ಯಾಚರಣೆಯು ರಾಷ್ಟ್ರೀಯ ಭದ್ರತೆಗೆ ಗಂಭೀರ ಪರಿಣಾಮಗಳನ್ನು ಬೀರಬಹುದು. ಹಾಗಾಗಿ, ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ನಡೆದ ಚಿನ್ನದ ಕಳ್ಳ ಸಾಗಾಣಿಕೆ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿದೆ’ ಎಂದು ಕೇಂದ್ರ ಗೃಹಸಚಿವಾಲಯದ ವಕ್ತಾರರು ತಿಳಿಸಿದ್ದಾರೆ. 

ರಾಜತಾಂತ್ರಿಕ ವಿಷಯಗಳಿಗೆ ಸಂಬಂಧಿಸಿದ ಬ್ಯಾಗೇಜ್ ಜೊತೆಗೆ ಸಾಗಿಸುತ್ತಿದ್ದ 30 ಕೆ.ಜಿ. ಚಿನ್ನವನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಕರಣದಲ್ಲಿ ಮಹಿಳೆ ಸೇರಿದಂತೆ ಇಬ್ಬರು ವ್ಯಕ್ತಿಗಳ ಮೇಲೆ ಅನುಮಾನ ಇದ್ದು, ಅವರು ನಾಪತ್ತೆಯಾಗಿದ್ದಾರೆ. 

//ಬಾಕ್ಸ್‌///

ಬಂಧಿತ ವ್ಯಕ್ತಿ ನ್ಯಾಯಾಂಗ ವಶಕ್ಕೆ

ಕೊಚ್ಚಿ: ಚಿನ್ನ ಅಕ್ರಮ ಸಾಗಾಣೆ ಪ್ರಕರಣದ ಆರೋಪದಲ್ಲಿ ಬಂಧಿಸಿರುವ ವ್ಯಕ್ತಿಯೊಬ್ಬರನ್ನು ನ್ಯಾಯಾಲಯವು ಕಸ್ಟಮ್‌ ಅಧಿಕಾರಿಗಳ ವಶಕ್ಕೆ ನೀಡಿದೆ. 

ಹೆಚ್ಚುವರಿ ಮುಖ್ಯ ಜಿಲ್ಲಾ ಮ್ಯಾಜೆಸ್ಟ್ರೇಟ್ ಪ್ರಕರಣದ ವಿಚಾರಣೆ ನಡೆಸಿದರು. ತಿರುವನಂತಪುರದಲ್ಲಿರುವ ಯುಎಇ ರಾಯಭಾರ ಕಚೇರಿಯ ಮಾಜಿ ಉದ್ಯೋಗಿ ಸರಿತ್ ಎಂಬುವವರನ್ನು ಜುಲೈ 15ರವರೆಗೆ ಕಸ್ಟಮ್ಸ್ ಪ್ರಿವೆಂಟಿವ್ ಕಮಿಷನರೇಟ್ ವಶಕ್ಕೆ ನೀಡಲಾಗಿದೆ. 

ಪ್ರಕರಣದ ಹೆಚ್ಚುವರಿ ತನಿಖೆಗೆ ಕಸ್ಟಡಿ ವಿಚಾರಣೆ ಅಗತ್ಯ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು. ಸರಿತ್‌ ಅವರನ್ನು ಸೋಮವಾರ ಬಂಧಿಸಲಾಗಿತ್ತು. 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು