ಶುಕ್ರವಾರ, ಆಗಸ್ಟ್ 12, 2022
22 °C

ಸಿಎಎ ನಿಯಮ ರಚನೆ: ಮೂರು ತಿಂಗಳು ಸಮಯ ಕೋರಿದ ಗೃಹ ಸಚಿವಾಲಯ

ಪಿಟಿಐ Updated:

ಅಕ್ಷರ ಗಾತ್ರ : | |

CAA

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನ್ವಯ ನಿಯಮಗಳನ್ನು ರೂಪಿಸಲು ಗೃಹ ಸಚಿವಾಲಯವು ಹೆಚ್ಚುವರಿ ಮೂರು ತಿಂಗಳು ಕಾಲಾವಕಾಶ ಕೋರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಬಂಧಿತ ಇಲಾಖೆಯ ಸ್ಥಾಯಿ ಸಮಿತಿಗೆ ಈ ಸಂಬಂಧ ಮನವಿ ಸಲ್ಲಿಸಲಾಗಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ನಿಯಮದ ಅನುಸಾರ, ರಾಷ್ಟ್ರಪತಿ ಅವರ ಅಂಕಿತ ದೊರೆತ ನಂತರದ ಆರು ತಿಂಗಳ ಅವಧಿಯಲ್ಲಿ ನಿಯಮಗಳನ್ನು ರೂಪಿಸಬೇಕು.

ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಲ್ಲಿ ದೌರ್ಜನ್ಯಕ್ಕೆಗೊಳಗಾದ ಮುಸ್ಲೀಮರೇತರರಿಗೆ ಭಾರತದ ಪೌರತ್ವ ನೀಡಲು ಅವಕಾಶ ಕಲ್ಪಿಸುವ ಈ ಕಾಯ್ದೆ ತೀವ್ರ ವಿವಾದಕ್ಕೆ ಗುರಿಯಾಗಿತ್ತು. ಎಂಟು ತಿಂಗಳ ಹಿಂದೆ ಸಂಸತ್ತು ಮಸೂದೆಗೆ ಅನುಮೋದನೆ ನೀಡಿದ್ದು, ಡಿಸೆಂಬರ್ 12, 2019ರಂದು ರಾಷ್ಟ್ರಪತಿ ಅಂಕಿತ ಹಾಕಿದ್ದರು.

ಸ್ಥಾಯಿ ಸಮಿತಿಯು ಸಿಎಎ ಸ್ಥಿತಿ ಕುರಿತು ಮಾಹಿತಿ ಬಯಸಿದ ಹಿಂದೆಯೇ ಗೃಹ ಸಚಿವಾಲಯವು ಹೆಚ್ಚುವರಿ ಅವಧಿ ಕೋರಿ ಮನವಿ ಸಲ್ಲಿಸಿದೆ. ಸ್ಥಾಯಿ ಸಮಿತಿಯು ಈ ಮನವಿಯನ್ನು ಒಪ್ಪುವ ಸಾಧ್ಯತೆಗಳಿವೆ ಎಂದು ಅಧಿಕಾರಿಯು ವಿವರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು