ಮಂಗಳವಾರ, ಆಗಸ್ಟ್ 3, 2021
23 °C

ಎನ್‌ಕೌಂಟರ್‌ನಲ್ಲಿ ಓರ್ವ ಉಗ್ರ ಸಾವು, ಸಿಆರ್‌ಪಿಎಫ್‌ ಯೋಧ ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

prajavani

ಶ್ರೀನಗರ: ಜಮ್ಮು–ಕಾಶ್ಮೀರದ ಮಾಲ್ಬಾಗ್‌ ಪ್ರಾಂತ್ಯದಲ್ಲಿ ಗುರುವಾರ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಸಿಆರ್‌ಪಿಎಫ್‌ನ ಒಬ್ಬ‌ ಯೋಧ ಹುತಾತ್ಮರಾಗಿದ್ದಾರೆ. ಇದೇ ವೇಳೆ ಒಬ್ಬ ಉಗ್ರ ಹತನಾಗಿದ್ದಾನೆ ಎಂದು ಪೊಲೀಸ್‌ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. 

ಭದ್ರತಾ ಪಡೆಗಳು ನಿಖರ ಮಾಹಿತಿ ಮೇರೆಗೆ ಮಾಲ್ಬಾಗ್‌ ಪ್ರದೇಶದಲ್ಲಿ ಶೋಧ ಕಾರ್ಯಚರಣೆ ಕೈಗೊಂಡಿದ್ದವು. ಈ ವೇಳೆ ಉಗ್ರರು ದಾಳಿ ನಡೆಸಿದ್ದರಿಂದ ಭದ್ರತಾ ಪಡೆಗಳು ಪ್ರತಿ ದಾಳಿ ನಡೆಸಿದವು ಎಂದು ಅವರು ಹೇಳಿದ್ದಾರೆ.

ಮೃತ ಉಗ್ರ ಯಾವ ಸಂಘಟನೆಗೆ ಸೇರಿದವನು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು