ಶುಕ್ರವಾರ, ಜನವರಿ 27, 2023
26 °C

ಕುಲ್ಗಾಂನಲ್ಲಿ ಎನ್‌ಕೌಂಟರ್‌:ಭಯೋತ್ಪಾದಕ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರಗಾಮಿಯೊಬ್ಬ ಮೃತಪಟ್ಟಿದ್ದು, ಭದ್ರತಾ ಪಡೆಯ ಒಬ್ಬ ಸಿಬ್ಬಂದಿ ಗಾಯಗೊಂಡಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿರುವ ಕುಲ್ಗಾಂನ ಅರ‍್ರಾ ಎಂಬಲ್ಲಿ ಉಗ್ರರು ತಂಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ತಾಣವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿದವು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಉಗ್ರಗಾಮಿಗಳು ಭದ್ರತಾ ಪಡೆಗಳ ಸಿಬ್ಬಂದಿಯತ್ತ ಗುಂಡುಹಾರಿಸಿದರು. ಯೋಧರ ಪ್ರತಿದಾಳಿಯಲ್ಲಿ ಒಬ್ಬ ಉಗ್ರ ಮೃತಪಟ್ಟಿದ್ದಾನೆ. ಗುಂಡಿನ ಕಾಳಗದಲ್ಲಿ ಸೇನಾಪಡೆ ಸಿಬ್ಬಂದಿಯೊಬ್ಬರು  ಗಾಯಾಳಾಗಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಕಾರ್ಯಾಚರಣೆ ಮುಂದುವರಿದಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು