ಸೋಮವಾರ, ಸೆಪ್ಟೆಂಬರ್ 28, 2020
24 °C

ಉತ್ತರಪ್ರದೇಶದಲ್ಲಿ ಮೂವರು ಯುವಕರಿಂದ 15 ವರ್ಷದ ಬಾಲಕಿ ಮೇಲೆ ಅತ್ಯಾಚಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಜಾಫ್ಫರನಗರ: 15 ವರ್ಷದ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಘಟನೆ ಉತ್ತರ ಪ್ರದೇಶದ ಮುಜಾಫ್ಫರನಗರದಲ್ಲಿ ನಡೆದಿದೆ. 

ಈ ಬಗ್ಗೆ ಅಪ್ರಾಪ್ತೆಯ ಕುಟುಂಬದವರು ದೂರು ದಾಖಲಿಸಿ‌ದ್ದು, ಗುರುವಾರ ಬಾಲಕಿ ಕಸ ಎಸೆಯಲೆಂದು ಮನೆಯಿಂದ ಹೊರ ಹೋಗಿದ್ದಳು. ಈ ವೇಳೆ ಆರೋಪಿಗಳು ಆಕೆಯನ್ನು ಅಪಹರಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

‘ಹತ್ತಿರದಲ್ಲೇ ಇದ್ದ ಕಾಡಿಗೆ ಕರೆದುಕೊಂಡು ಹೋಗಿ ಬಾಲಕಿಯ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ. ಅಲ್ಲದೆ ಇದನ್ನು ವಿಡಿಯೊ ರೆಕಾರ್ಡ್ ಕೂಡ‌ ಮಾಡಿದ್ದಾರೆ’ ಎಂದು ಪೊಲೀಸ್‌ ಅಧಿಕಾರಿ ಸಂಜೀವ್‌ ಕುಮಾರ್‌ ತಿಳಿಸಿದರು. 

‘ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದ್ದು, ಆದಷ್ಟು ಬೇಗ ಅವರನ್ನು ಬಂಧಿಸುತ್ತೇವೆ ಎಂದು ಅವರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು