ಬುಧವಾರ, ಆಗಸ್ಟ್ 5, 2020
22 °C
MP: Cong MLA quits party, joins BJP

ಮಧ್ಯಪ್ರದೇಶ: ಕಾಂಗ್ರೆಸ್ ಶಾಸಕ ಲೋಧಿ ಬಿಜೆಪಿಗೆ ಸೇರ್ಪಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭೋಪಾಲ್‌: ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕ ಪ್ರದ್ಯುಮ್ನ ಸಿಂಗ್ ಲೋಧಿ ಅವರು ಶಾಸಕ ಸ್ಥಾನ ಮತ್ತು ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿ ಭಾನುವಾರ ಬಿಜೆಪಿ ಸೇರಿದರು.

ಬಡಾ ಮಲ್ಹೇರಾ ಕ್ಷೇತ್ರದ ಶಾಸಕರಾಗಿರುವ ಲೋಧಿ ಅವನ್ನು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಅವರು ಪಕ್ಷಕ್ಕೆ ಬರಮಾಡಿಕೊಂಡರು. 

‘ನಾನು ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆ ಅಂಗೀಕಾರವಾಗಿದೆ. ಕೇವಲ ಬಿಜೆಪಿ ಮಾತ್ರ ನನ್ನ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿಪಡಿಸಬಲ್ಲದು. ನನ್ನ ಕ್ಷೇತ್ರದಲ್ಲಿನ ಅಭಿವೃದ್ಧಿನ ಯೋಜನೆಗಳಿಗೆ ಮುಖ್ಯಮಂತ್ರಿ ಕೂಡಾ ಒಪ್ಪಿಗೆ ನೀಡಿದ್ದಾರೆ’ ಎಂದು ಲೋಧಿ, ಪತ್ರಕರ್ತರಿಗೆ ತಿಳಿಸಿದ್ದಾರೆ. 

ಲೋಧಿ ಅವರ ರಾಜೀನಾಮೆಯಿಂದಾಗಿ ಮಧ್ಯಪ್ರದೇಶದ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 91ಕ್ಕೆ ಇಳಿದಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು