ಬಹರಾಯಿಚ್: ನೇಪಾಳವು ತನ್ನ ಮೂರು ಅಣೆಕಟ್ಟೆಗಳಿಂದ ನದಿಗಳಿಗೆ ಹೆಚ್ಚುವರಿ ನೀರು ಬಿಟ್ಟ ಕಾರಣ ಉತ್ತರ ಪ್ರದೇಶದ ಬಹರಾಯಿಚ್ ಜಿಲ್ಲೆಯ 60ಕ್ಕೂ ಅಧಿಕ ಹಳ್ಳಿಗಳು ಪ್ರವಾಹದಿಂದ ಮುಳುಗಡೆಯಾಗಿವೆ ಎಂದು ಜಿಲ್ಲಾಡಳಿತದ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಪ್ರವಾಹದಿಂದಾಗಿ 1.50 ಲಕ್ಷಕ್ಕೂ ಅಧಿಕ ಜನರು ನಿರಾಶ್ರಿತರಾಗಿದ್ದು, 171ಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿವೆ. ಜನರ ರಕ್ಷಣೆಗಾಗಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

‘ಲಕ್ಷಾಂತರ ಕ್ಯುಸೆಕ್ ನೀರನ್ನು ನೇಪಾಳವು ಅಣೆಕಟ್ಟೆಗಳಿಂದ ಬಿಟ್ಟಿದ್ದು, ಕನಿಷ್ಠ 61 ಹಳ್ಳಿಗಳು ಮುಳುಗಡೆಯಾಗಿವೆ. ಕೇಸರ್‌ಗಂಜ್, ಮಹ್ಸಿ ಮತ್ತು ಮಹಿಪೂರ್ವ ತಾಲ್ಲೂಕುಗಳ ಹಳ್ಳಿಗಳಲ್ಲಿ 1.50 ಲಕ್ಷಕ್ಕೂ ಅಧಿಕ ಜನರು ವಾಸಿಸುತ್ತಿದ್ದಾರೆ. ಈ ಪೈಕಿ ಏಳು ಹಳ್ಳಿಗಳಲ್ಲಿ ಪರಿಸ್ಥಿತಿ ತೀವ್ರ ಗಂಭೀರವಾಗಿದೆ. ಜಿಲ್ಲಾಡಳಿತವು ಸಂತ್ರಸ್ತರಿಗೆ ನೆರವು ನೀಡುತ್ತಿದ್ದು, ರಕ್ಷಣಾ ಚಟುವಟಿಕೆಗಾಗಿ ಒಂದು ಮೋಟಾರ್ ಬೋಟ್, 179 ದೋಣಿ ಹಾಗೂ ಎನ್‌ಡಿಆರ್‌ಎಫ್ ಸಿಬ್ಬಂದಿ, 48 ವೈದ್ಯಕೀಯ ತಂಡವನ್ನು ನಿಯೋಜಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಜೈ ಚಂದ್ರ ಪಾಂಡೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.