ಭಾನುವಾರ, ಆಗಸ್ಟ್ 9, 2020
22 °C

ಶಾಲಾ ಮಕ್ಕಳಿಗೆ ಉಪಾಹಾರ ಒದಗಿಸಲು ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾವ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಸದ್ಯ ಜಾರಿಯಲ್ಲಿರುವ ಮಧ್ಯಾಹ್ನದ ಬಿಸಿಯೂಟದ ಜತೆ ಬೆಳಗ್ಗೆ ಉಪಾಹಾರವನ್ನು ಸಹ ಒದಗಿಸಬೇಕು ಎಂದು ನೂತನ ಶಿಕ್ಷಣ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ.

ಪೌಷ್ಟಿಕ ಆಹಾರವುಳ್ಳ ಉಪಾಹಾರ ಮಕ್ಕಳ ಆರೋಗ್ಯದ ದೃಷ್ಟಿಯಿಂದ ಉತ್ತಮ. ಅಪೌಷ್ಟಿಕತೆಯಿಂದ ಬಳಲುವವರು ಅಥವಾ ಅನಾರೋಗ್ಯದಿಂದ ಇದ್ದರೆ ಮಕ್ಕಳು ಕಲಿಕೆಯಲ್ಲಿ ಹಿಂದುಳಿಯುತ್ತಾರೆ. ಹೀಗಾಗಿ, ಪೌಷ್ಟಿಕತೆ ಮತ್ತು ಆರೋಗ್ಯದ ಬಗ್ಗೆ ಗಮನಹರಿಸಬೇಕಾಗಿದೆ ಎಂದು ನೀತಿಯಲ್ಲಿ ಉಲ್ಲೇಖಿಸಲಾಗಿದೆ.

ಬೆಳಗಿನ ಸಮಯದಲ್ಲಿ ಪೌಷ್ಟಿಕಾಂಶಗಳಿರುವ ಉಪಾಹಾರ ಸೇವಿಸುವುದರಿಂದ ಕಲಿಕೆಯಲ್ಲಿ ಉತ್ತಮ ಪ್ರಗತಿ ಸಾಧಿಸಬಹುದು ಎಂದು ಸಂಶೋಧನೆಗಳು ತಿಳಿಸಿವೆ. ಮಕ್ಕಳು ಬೆಳಗಿನ ಜಾವ ಶಾಲೆಯಲ್ಲಿ ಹಸಿವಿನಿಂದ ಇದ್ದರೆ ಕಲಿಕೆಯಲ್ಲಿ ಆಸಕ್ತಿ ತೋರುವುದಿಲ್ಲ. ಹೀಗಾಗಿ, ಈ ಯೋಜನೆ ಜಾರಿಗೊಳಿಸಬಹುದು ಎಂದು ತಿಳಿಸಿದೆ.

ಮಕ್ಕಳ ಆರೋಗ್ಯದ ಬಗ್ಗೆ ಗಮನಹರಿಸಲು ಅತ್ಯುತ್ತಮ ತರಬೇತಿ ಪಡೆದ ಸಾಮಾಜಿಕ ಕಾರ್ಯಕರ್ತರು, ಸಮಾಲೋಚಕರು ಮತ್ತು ಸಮುದಾಯದಲ್ಲಿ ಕ್ರಿಯಾಶೀಲವಾಗಿ ಭಾಗಿಯಾದವರನ್ನು ಶಾಲೆಯ ಆಡಳಿತ ವ್ಯವಸ್ಥೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.

ಬಿಸಿಯೂಟ ಒದಗಿಸಲು ಸಾಧ್ಯವಿಲ್ಲದ ಸ್ಥಳಗಳಲ್ಲಿ ಸಾದಾ ಆಹಾರ ಒದಗಿಸಬಹುದು. ಅದರೆ, ಪೌಷ್ಟಿಕಾಂಶಗಳಿಂದ ಕೂಡಿರಬೇಕು. ಬೆಲ್ಲದ ಜತೆ ಶೇಂಗಾ ಹಾಗೂ ಸ್ಥಳೀಯ ಹಣ್ಣುಗಳನ್ನು ಒದಗಿಸಬೇಕು ಎಂದು ಪ್ರಸ್ತಾಪಿಸಲಾಗಿದೆ.

ಕೇಂದ್ರ ಸಚಿವ ಸಂಪುಟ ಹೊಸ ಶಿಕ್ಷಣ ನೀತಿಗೆ ಕಳೆದ ವಾರ ಅನುಮೋದನೆ ನೀಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.